ಕಲಬುರಗಿ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟಂಟಂ ವಾಹನಕ್ಕೆ ಸಾರಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಟಂಟಂ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ನಂದೂರ ತಾಂಡಾ ಬಳಿ ಸಂಭವಿಸಿದೆ.
ಮೃತ ಚಾಲಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರೋಡ್ ಬ್ರೇಕರ್ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಘಟನೆಯಲ್ಲಿ ಟಂಟಂ ಚಾಲಕ ಕುಳಿತ ಸೀಟಿನಲ್ಲೆ ಮೃತಪಟ್ಟಿದ್ದು, ಟಂಟಂ ಸಂಪುರ್ಣ ನಂಜು ಗುಂಜಾಗಿದೆ.
ಈ ಕುರಿತು ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.