ವಿಜ್ಞಾನ ಪ್ರದರ್ಶದಿಂದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಲು ಸಾಧ್ಯ: ಅಹ್ಮದ್ ಪಟೇಲ್

0
26

ಶಹಾಬಾದ: ವಿಜ್ಞಾನ, ಸಮಾಜ ಹಾಗೂ ಗಣಿತ ಪ್ರದರ್ಶನದಿಂದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆಯ ಜತೆಗೆ ಇತಿಹಾಸದ ಅರಿವು ಮತ್ತು ಜ್ಞಾನಪಡೆಯಲು ಸಾಧ್ಯವಾಗುತ್ತದೆ ಎಂದು ನಗರಸಭೆಯ ಸದಸ್ಯ ಡಾ.ಅಹ್ಮದ್ ಪಟೇಲ್ ಹೇಳಿದರು.

ಅವರು ಗುರುವಾರ ನಗರದ ಸರಕಾರಿ ಬಾಲಕರ ಪ್ರೌಢಶಾಲೆ ಹಾಗೂ ಉರ್ದು ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಮಕ್ಕಳ ವಿಜ್ಞಾನ, ಸಮಾಜ ಹಾಗೂ ಗಣಿತ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಮಕ್ಕಳಲ್ಲಿ ಅಡಗಿದ ಪ್ರತಿಭೆ ಹೊರತರಲು ಹಾಗೂ ಅವರ ಜ್ಞಾನದ ಬೆಳೆವಣಿಗೆಗೆ ವಿಜ್ಞಾನ ಪ್ರದರ್ಶನಗಳು ನೆರವಾಗಬಲ್ಲವು.ಇತ್ತೀಚಿನ ದಿನಗಳಲ್ಲಿ ವಿಜ್ಞಾನ ವಿ?ಯವು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವ ಪಡೆದುಕೊಂಡಿದೆ. ಶಿಕ್ಷಕರು ಮಕ್ಕಳಿಗೆ ವಿಜ್ಞಾನ ವಿ?ಯದಲ್ಲಿ ಆಸಕ್ತಿ ಮೂಡಿಸಲು ಮುಂದಾಗಬೇಕು. ಪ್ರಯೋಗಗಳನ್ನು ಮಾಡುವ ಮೂಲಕ ಪಾಠ ಬೋಧನೆ ಮಾಡಿದರೆ, ವಿದ್ಯಾರ್ಥಿಗಳಿಗೆ ಸುಲಭದಲ್ಲಿ ಅರ್ಥವಾಗುತ್ತದೆ. ಮಕ್ಕಳಿಗೆ ವಿಜ್ಞಾನದ ಹಲವು ಪ್ರಯೋಗಗಳನ್ನು ಪ್ರಾತ್ಯಕ್ಷಿಕೆ ನೀಡಿದಾಗ ಅವರು ವಿ?ಯವನ್ನು ಗ್ರಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸರಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಗುರು ಏಮನಾಥ ರಾಠೋಡ ಮಾತನಾಡಿ,ಶಾಲೆಗಳಲ್ಲಿ ವಿಜ್ಞಾನಕ್ಕೆ ಹೆಚ್ಚು ಒತ್ತು ನೀಡಿದರೆ, ಮಕ್ಕಳ ಪ್ರತಿಭೆಯ ತಕ್ಕಂತೆ ಅವರು ತಾಲೂಕಾ, ರಾಜ್ಯ , ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ದೇಶಕ್ಕೆ ಕೀರ್ತಿ ತರುತ್ತಾರೆ. ಆದ್ದರಿಂದ ಮಕ್ಕಳ ಪ್ರತಿಭೆಯನ್ನು ಚಿಕ್ಕ ವಯಸ್ಸಿನಲ್ಲಿ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಲು ಶಿಕ್ಷಕರು ಮುಂದಾಗಬೇಕು ಎಂದು ತಿಳಿಸಿದರಲ್ಲದೇ, ಮಕ್ಕಳಿಗೆ ಅನ್ವೇ?ಣೆ, ಸಂಶೋಧನೆ ಬೆಳೆಸಲು ಇಂತಹ ವಿಜ್ಞಾನ ವಸ್ತು ಪ್ರದರ್ಶನ ತುಂಬಾ ಅನುಕೂಲವಾಗಿವೆ. ಇದರಿಂದ ಮಕ್ಕಳಿಗೆ ವೈಜ್ಞಾನಿಕ ವಿಚಾರ ಬೆಳೆಸಲು ವಿಜ್ಞಾನ ಮಹತ್ವ ಮಕ್ಕಳಿಗೆ ತಿಳಿದುಕೊಳ್ಳಲು ನೆರವಾಗುತ್ತದೆ ಎಂದರು.

ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ಮಾತನಾಡಿ,ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನದಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯಲು ಹಾಗೂ ಅವರಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ. ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗದಲ್ಲಿ ಅಕ್ಷರಾಭ್ಯಾಸ ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ. ಈ ನಿಟ್ಟಿನಲ್ಲಿ ಆಯೋಜಿಸಿದ್ದ ವಿಜ್ಞಾನ, ಸಮಾಜ ಹಾಗೂ ಗಣಿತ ಪ್ರದರ್ಶನ ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿ ಪ್ರಾಂಶುಪಾಲ ಶಮಶೋದ್ದಿನ್ ಪಟೇಲ್,ಎಸ್‌ಡಿಎಮ್‌ಸಿ ಅಧ್ಯಕ್ಷ ನರಸಿಂಗ, ಶಿಕ್ಷಕರಾದ ಸಾಲೆಹಾ ಸಮೀನಾ, ವಿಜಯಲಕ್ಷ್ಮಿ,ವಾಣಿಶ್ರೀ, ಸಾವಿತ್ರಿ, ಅಂಜುಮ ಫರಕಂದಾ, ಪು?, ಸಾಹಿನ ಸುಲ್ತಾನಾ, ಅಜರಾ ಸುಲ್ತಾನಾ, ಪು?ವತಿ ಹಾಗೂ ಶಾಲಾಮಕ್ಕಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here