ಮಹಿಳೆಯರ ಸಬಲೀಕರಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಶ್ರಮ

0
21

ಶಹಾಬಾದ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ವರ್ಷಗಳಿಂದ ಹಳ್ಳಿ, ನಗರ, ರಾಜ್ಯ ಹಾಗೂ ರಾಷ್ಟ್ರ ವ್ಯಾಪ್ತಿ ಶಾಖೆಗಳನ್ನು ಹೊಂದಿ ಅನೇಕ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿಣಾಭಿವೃದ್ಧಿ ಸಂಸ್ಥೆಯ ಪ್ರಾದೇಶಿಕ ಕಚೇರಿ ಹಿರಿಯ ಜ್ಞಾನವಿಕಾಸ ಸಮನ್ವಯಾಧಿಕಾರಿ ವನಜಾಕ್ಷಿ ಹೇಳಿದರು.

ಅವರು ನಗರದ ಭೀಮಶಪ್ಪ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿಣಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಕೇಂದ್ರದಲ್ಲಿ ಆಯೋಜಿಸಲಾದ ಚಲನಚಿತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಮಹಿಳೆಯರು ತಮ್ಮ ಕುಟುಂಬ ವ್ಯವಹಾರಕ್ಕೆ ಸ್ವಸಹಾಯ ಸಂಘಗಳ ಮೂಲಕ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಜೊತೆಗೆ ಮಹಿಳೆಯರು ವ್ಯಾಪಾರ ಮಾಡುವ ಜತೆಗೆ ಇನ್ನೀತರ ಕಸಬುಗಳನ್ನು ಮಾಬಹುದು. ಇದರಿಂದ ಮಹಿಳೆಯರು ಹಾಗೂ ಅವರ ಕುಟುಂಬ ಆರ್ಥಿಕವಾಗಿ ಸ್ವಾವಲಂಬನೆಯಾಗಲು ಸಂಸ್ಥೆಯ ಯೋಜನೆಗಳು ಸಹಕಾರಿಯಾಗಿವೆ ಎಂದರು.

ವಾಡಿ-ಶಹಾಬಾದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್ ಮಾತನಾಡಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ಜಾತಿ, ಮತ, ಧರ್ಮವನ್ನು ಮೀರಿ ಎಲ್ಲರನ್ನೂ ಒಗ್ಗೂಡಿಸಿ ಆರ್ಥಿಕವಾಗಿ ಸದೃಢರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಬಿ ಬದುಕು ಸಾಗಿಸಲು ಸಶಕ್ತರನ್ನಾಗಿ ಮಾಡುವಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ ಎಂದರು.

ಧರ್ಮಸ್ಥಳ ಗ್ರಾಮಿಣಾಭಿವೃದ್ಧಿ ಸಂಸ್ಥೆಯ ಪ್ರತಿನಿಧಿಗಳಿಗೆ ಕೇಂದ್ರದಲ್ಲಿ ಯೋಜನೆಗಳ ಕುರಿತು ಚಲನಚಿತ್ರ ತೋರಿಸಲಾಯಿತು. ಸರಕಾರಿ ವಡ್ಡರ ಸಂಘದ ಶಾಲೆಯ ಶಿಕ್ಷಕಿ ಬಾಯಮ್ಮ, ವಲಯ ಮೇಲ್ವಿಚಾರಕರು ಸೇವಾ ಪ್ರತಿನಿಧಿ ಹಾಗೂ ಕೇಂದ್ರ ಸಂಘದ ಸದಸ್ಯರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here