ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಶನಿವಾರ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್.ವಿ.ಪಿ.ವೃತ್ತದಲ್ಲಿ ಹೈದ್ರಾಬಾದ ಕರ್ನಾಟಕ ವಿಮೋಚನೆಯ ರೂವಾರಿ ಸರ್ದಾರ ವಲ್ಲಭಭಾಯ್ ಪಟೇಲ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಮುಖ್ಯಮಂತ್ರಿಗಳಿಗೆ ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಂದ್ರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಸಾಥ್ ನೀಡಿದರು.
ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ವಿಧಾನಸಭೆ ಶಾಸಕರುಗಳಾದ ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಾಜಿ ಎಂ.ಎಲ್.ಸಿ. ಅಮರನಾಥ ಪಾಟೀಲ, ಡಿ.ಸಿ.ಯಶವಂತ ವಿ. ಗುರುಕರ್, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಹೈದ್ರಾಬಾದ ಕರ್ನಾಟಕ ಪ್ರದೇಶ ಇತಿಹಾಸ ರಚನಾ ಸಮಿತಿಯ ಸದಸ್ಯ ಕಾರ್ಯದರ್ಶಿ ಲಕ್ಷ್ಮಣ ದಸ್ತಿ, ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.