ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಕಲಬುರಗಿಯಲ್ಲಿ ಕಪ್ಪು ಬಟ್ಟೆ ಪ್ರದರ್ಶನ ತಳವಾರ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಮತ್ತು ಸಿಎಂಗೆ ಬರೆಯಲಾದ ಮನವಿ ಪತ್ರವನ್ನು ಚಲಿಸುತ್ತಿದ್ದ ಸಿಎಂ ಕಾರಿನೊಳ್ಳಗೆ ಎಸಿದಿರುವ ಘಟನೆ ಶನಿವಾರ ಜರುಗಿತ್ತು.
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ನಿಮಿತ್ತ ಕಲಬುರಗಿ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ನಗರದ ಸರದಾರ್ ಬಲ್ಲಭಾಯಿ ಪಟೇಲ್ ವೃತದಲ್ಲಿರುವ ಹೈದ್ರಾಬಾದ ಕರ್ನಾಟಕ ವಿಮೋಚನೆಯ ರೂವಾರಿ ಸರ್ದಾರ ವಲ್ಲಭಭಾಯ್ ಪಟೇಲ್ ರವರ ಪ್ರತಿಮೆಗೆ ಮಾಲಾರ್ಪಣೆಗೆ ಮಾಡಿ ತೆರಳುವ ವೇಳೆಯಲ್ಲಿ ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಳವಾರ ಸಮಾಜದ ಮುಖಂಡರಿಂದ ಭಾರೀ ವಿರೋಧವನ್ನು ಎದುರಿಸಿದರು.
ವಲ್ಲಭಭಾಯ್ ಪಟೇಲ್ ರವರ ಪ್ರತಿಮೆಗೆ ಮಾಲಾರ್ಪಣೆಗೆ ತೆರಳುವ ವೇಳೆ ಮುಖಂಡರು ಸಿಎಂಗೆ ಕಪ್ಪು ಬಟ್ಟೆ ಪ್ರದರ್ಶಿ ಕೋಲಿ, ಕಬ್ಬಲಿಗ, ಗಂಗಾತಮ ಸಮುದಾಯಕ್ಕೆ ತಳವಾರ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿದರು.
ಹೋರಾಟಗಾರರ ರಾಜ್ಯಧ್ಯಕ್ಷರಾದ ಡಾ. ಸರದಾರಾಯಪ್ಪ, ಪ್ರಧಾನ ಕಾರ್ಯದರ್ಶಿಗಳದ ರಾಜೇಂದ್ರ ರಾಜ್ವಾಳ್ ಜೆರಿ, ತಾಲೂಕ್ ಅಧ್ಯಕ್ಷರಾದ ಗಿರಿ ತುಂಬಿ, ಸುನಿತಾ ಎಂ ತಳವಾರ್, ದಿಗಂಬರ್ ಮುದುಕಣ್ಣ, ಪ್ರೇಮ್ ಕಾಲಿ, ಸಂತೋಷ್ ತಳವಾರ್, ಸೈಬಣ್ಣ ತಳವಾರ್, ಜೈ ಶಂಕರ್ ರಾಯಪ್ಪ ಈ ಹೋರಾಟಗಾರರು ಪೊಲೀಸರು ವಶಕ್ಕೆ ಪಡೆದು ವಿಶ್ವವಿದ್ಯಾಲಯದ ತಾಣದಲ್ಲಿ ಕೂರಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…