ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಸಿಎಂಗೆ ಮನವಿ

0
17

ಕಲಬುರಗಿ: ಮಾದಿಗ ಸಮಾಜದ ಬಹು ದಿನಗಳ ಬೇಡಿಕೆಯಾದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರ ಸರ್ಕಾರ-ಕ್ಕೆ ಶಿಫಾರಸ್ಸು ಮಾಡುವಂತೆ ಡಾ.ಬಾಬು ಜಗಜೀವನರಾಮ ಅಭಿವೃದ್ಧಿ ಮತ್ತು ಹೋರಾಟ ಸಮಿತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆಸಮಿತಿ ಜಿಲ್ಲಾಧ್ಯಕ್ಷ ರಾಜು ಎಸ್.ಕಟ್ಟಿಮನಿ ನೇತೃತ್ವದಲ್ಲಿ ಮನವಿಪತ್ರ ಸಲ್ಲಿಸಿ ಸದಾಶಿಯ ಆಯೋಗದ ವರದಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿದರು.

Contact Your\'s Advertisement; 9902492681

ಸದಾಶಿವ ಆಯೋಗದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿ ಹಲವಾರು ವರ್ಷಗಳು ಕಳೆದಿವೆ. ವರದಿ ಜಾರಿಗೆ ಆಗ್ರಹಿಸಿ ಮಾದಿಗ ಸಂಘಟನೆಗಳು ರಾಜ್ಯಾದ್ಯಂತ ಅನೇಕ ಹೋರಾಟ ನಡೆಸಿವೆ ಆದರೂ ಸರ್ಕಾರ ಇದುವರೆಗೂ ವರದಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿಲ್ಲ. ಇನ್ನು ಮುಂದಾದರೂ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು, ಇಲ್ಲದೇ ಹೋದಲ್ಲಿ ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಡಿ.ಎಸ್.ಎಸ್.ರಾಜ್ಯ ಕಾರ್ಯಾಧ್ಯಕ್ಷ ದಶರಥ ಎಂ.ಕಲಗುರ್ತಿ, ರಮೇಶ ಎಚ್.ವಾಡೇಕರ್, ಚಂದಪ್ಪ ಕಟ್ಟಿಮನಿ, ಸಚೀನ್ ಆರ್.ಕಟ್ಟಿಮನಿ, ಸಂಜುಕುಮಾರ ಕಟ್ಟಿಮನಿ, ಗುರುರಾಜ ಬಂಡಾರಿ, ಬಂಡೇಶ ರತ್ನಡಗಿ, ಮಂರಲಿಂಗ ಅಣಗಿ, ಸೈಬಣ್ಣ ಗಡೇಸೂರ, ವೇಂಕಟೇಶ ನಾಟೇಕಾರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here