ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಐಸಿಎಆರ್ – ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿ, ಜಿಲ್ಲಾ ಪಂಚಾಯತ ಕಲಬುರಗಿ ಮತ್ತು ಸಂಜೀವನಿ-ಕರ್ನಾಟಕ ರಾಜ್ಯ ಗ್ರಾಮಿಣ ಜೀವನೋಪಾಯ ಸಂವರ್ಧನ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿ ಸಖಿ) “ಪರಿಸರ ಕೃಷಿ ವಿಧಾನಗಳು” ಕುರಿತು 6 ದಿನಗಳ (12 ರಿಂದ 17 ಸೇಪ್ಟೆಂಬರ್ 2022) ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ತರಬೇತಿಯಲ್ಲಿ ಒಟ್ಟು 34 ಜನ ಕೃಷಿ ಸಖಿಯರಿಗೆ ಪರಿಸರ ಕೃಷಿಯ ಬಗ್ಗೆ ಅರಿವು ಮುಡಿಸಲಾಯಿತು.
ಈ ತರಬೇತಿಯ ಸಮಾರೂಪ ಸಮಾರಂಭ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಭಾಷಣದಲ್ಲಿ ಡಾ.ಎಮ್.ಎಮ್.ಧಾನೋಜಿ, ಡೀನ್ (ಕೃಷಿ) ಕೃಷಿ ಮಹಾವಿದ್ಯಾಲಯ, ಕಲಬುರಗಿರವರು ಕೃಷಿ ಸಖಿಯರಿಗೆ ಸರಕಾರದಿಂದ ಅನುಷ್ಠಾನಗೊಂಡ ಯೋಜನೆಗಳನ್ನು ರೈತರಿಗೆ ಸಮರ್ಪಕವಾಗಿ ಬಳಸಿಕೊಳ್ಳಲು ತಿಳಿಸಬೇಕು. ಮುಖ್ಯ ಅತಿಥಿಯಾಗಿ ಡಾ. ಬಿ.ಎಮ್.ದೊಡ್ಡಮನಿ, ಸಹಸಂಶೋಧನಾ ನಿರ್ದೇಶಕರು, ವಲಯ ಕೃಷಿ ಸಂಶೋಧನಾ ಕೇಂದ್ರ, ಕಲಬುರಗಿ ಇವರು ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಒತ್ತು ಕೊಡಲು ಕೃಷಿ ಸಖಿಯರಿಗೆ ಹೇಳಿದರು ಹಾಗೂ ಡಾ. ರವಿಶಂಕರ್.ಜಿ, ವಿಶೇಷಾಧಿಕಾರಿಗಳು, ಕೃಷಿ ಮಹಾವಿದ್ಯಾಲಯ, ಹಗರಿ, ಬಳ್ಳಾರಿ ರವರು ಮಾತನಾಡಿ ಕೇಂದ್ರದಲ್ಲಿ ಪಡೆದ ವೈಜ್ಞಾನಿಕ ಮಾಹಿತಿಯನ್ನು ರೈತರಿಗೆ ವಿವರಿಸಬೇಕಾಗಿ ತಿಳಿಸಿದರು. ಕಾರ್ಯಕ್ರಮವನ್ನು ಡಾ.ರಾಜು ಜಿ. ತೆಗ್ಗಳ್ಳಿ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಸ್ವಾಗತಿಸಿದರೆ, ಡಾ. ಯುಸುಫ್‍ಅಲಿ, ವಿಜ್ಞಾನಿ, ಕೆವಿಕೆ ಕಲಬುರಗಿ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಕೃಷಿ ಸಖಿಯರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತ್ತು. ಕೊನೆಯಲ್ಲಿ ಡಾ.ಜಹೀರ ಅಹಮದ್, ವಂದನಾರ್ಪಣೆ ಮಾಡಿದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…