ಕಲಬುರಗಿ: ಅನುದಾನಿತ ನೌಕರರ ಜ್ವಲಂತ ಬೇಡಿಕೆಗಳಾದ ಕಾಲ್ಪನಿಕ ವೇತನ ನಿಶ್ಚಿತ ಪಿಂಚಣಿ ಮತ್ತು ಜ್ಯೋತಿ ಸಂಜೀವಿನಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಸೆ. 20 ರಂದು ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕಿನಲ್ಲಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕೇಲೇಜಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯ ಅಧ್ಯಕ್ಷ ಜಿ. ಹನುಮಂತಪ್ಪ ತಿಳಿಸಿದ್ದಾರೆ.
ನಂತರ ನೇಮಕಾತಿಗಾಗಿ ವೇತನ ಪಡೆಯುತ್ತಿರುವ ಹಾಗೂ ಮೊದಲೇ ನೇಮಕಗೊಂಡು ನಂತರ ಅನುದಾನಕ್ಕೊಳಪಟ್ಟು ವೇತನ ಪಡೆಯುತ್ತಿರುವ ನೌಕರರಿಗೆ ಯಾವದೇ ವಿವಿಧ ಪಿಂಚಣಿ ಸೌಲಭ್ಯ ಇರುವುದಿಲ್ಲ. ಎನ್.ಪಿ.ಎಸ್. ಅಥವಾ ಒ.ಪಿ.ಎಸ್. ಕೂಡ ಇರುವುದಿಲ್ಲ. ಇದರಿಂದಾಗಿ ಈಗಾಗಲೇ ಸುಮಾರು 03 ಸಾವಿರಕ್ಕೂ ಹೆಚ್ಚು ನೌಕರರು ಕೊನೆಯ ತಿಂಗಳ ಸಂಬಳದೊಂದಿಗೆ ಮಾತ್ರ ನಿವೃತ್ತಿಯಾಗುತ್ತಿದ್ದಾರೆ.
ಸರ್ಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಈ ಹೋರಾಟಕ್ಕೆ ನಮ್ಮ ಸಂಘವು ಗುಲಬರ್ಗಾ ಜಿಲ್ಲಾ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಕಾಲೇಜು ಪ್ರಾಂಶುಪಾಲರ ಸಂಘ ಸಂಪೂರ್ಣವಾಗಿ ಬೆಂಬಲವನ್ನು ಕೋಡಲಾಗುತ್ತಿದೆ ಎಂದು ಎಂದು ಗುಲಬರ್ಗಾ ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಹಾಗೂ ಕಿರಿಯ ಕಾಲೇಜುಗಳ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಮರೆಪ್ಪ ಎಂ. ಬಸವಪಟ್ಟಣ ಹಾಗೂ ಪ್ರಧಾನ ಕಾರ್ಯದರ್ಶಿ ಮಹೇಶ ಹಿರೇಮಠ ತಿಳಿಸಿದ್ದಾರೆ.
ಜಿಲ್ಲೆಯಿಂದ ಎಲ್ಲಾ ಅನುದಾನಿತ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಸೆಪ್ಟೆಂಬರ್ 20 ರಂದು ಹೋರಾಟದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.