ಬಿಸಿ ಬಿಸಿ ಸುದ್ದಿ

ಸುರಪುರ: ನರೇಂದ್ರ ಮೋದಿ ಜನುಮ ದಿನಕ್ಕೆ ಯುವ ಮೋರ್ಚಾ ರಕ್ತದಾನ

ಸುರಪುರ:ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನುಮ ದಿನಾಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ರಕ್ತದಾನ ಶಿಬಿರವನ್ನು ನಡೆಸಲಾಯಿತು.

ಶಿಬಿರಕ್ಕೆ ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಚಾಲನೆ ನೀಡಿ ಮಾತನಾಡಿ,ಈ ದೇಶಕಂಡ ಅತ್ಯುತ್ತಮ ಪ್ರಧಾನಮಂತ್ರಿಗಳಲ್ಲಿ ನರೇಂದ್ರ ಮೋದಿಯವರು ಒಬ್ಬರಾಗಿದ್ದಾರೆ.ಅವರ ಜನುಮ ದಿನದಂದು ನಮ್ಮ ಸುರಪುರ ತಾಲೂಕಿನ ಎಲ್ಲಾ ಬಿಜೆಪಿ ಯುವ ಮೋರ್ಚಾದ ಮುಖಂಡರು ಹಾಗೂ ಕಾರ್ಯಕರ್ತರು ರಕ್ತದಾನ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಪ್ರಧಾನಮಂತ್ರಿಯವರ ಜನುಮ ದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಇಪ್ಪತ್ತಕ್ಕೂ ಹೆಚ್ಚುಜನ ರಕ್ತದಾನ ಮಾಡಿದರು.ರಕ್ತದಾನ ಮಾಡಿದ ಎಲ್ಲರಿಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಶರಣು ನಾಯಕ ಬೈರಿಮಡ್ಡಿ,ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶ್ರವಣಕುಮಾರ ನಾಯಕ ಡೊಣ್ಣಿಗೇರಾ,ಉಪಾಧ್ಯಕ್ಷರಾದ ರಾಮನಗೌಡ ಬೈಲಾಪುರ, ,ಶೇಖು ಭೂಮಶೇಟ್ಟಿ ಸುಗೂರ,ರಾಮು ಪಾಳದಕೇರಾ,ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಾ ಮಂಗಿಹಾಳ,ಮಲ್ಲಿಕಾರ್ಜುಜನ ಚಾನಕೋಟೆ ಕನ್ನೆಳ್ಳಿ, ,ಸದಸ್ಯರುಗಳಾದ ಪರಮಗೌಡ ಹೆಮನೂರ,ವಾಸು ಬೈರಿಮಡ್ಡಿ ಗೋಪಾಲ ವಾಗಣಗೇರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ: ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ…

16 seconds ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

5 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

9 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

10 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

32 mins ago

ಡಾ. ವೀರೇಂದ್ರ ಹೆಗ್ಗಡೆ ಜನ್ಮದಿನ: ರಕ್ತದಾನಶಿಬಿರ

ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…

36 mins ago