ಶಹಾಬಾದ:ಮಹಾನ್ ನಾಯಕರ ತ್ಯಾಗ ಬಲಿದಾನಗಳ ಫಲವಾಗಿ ಹೈದ್ರಬಾದ ಕರ್ನಾಟಕ ಪ್ರದೇಶ ನಿಜಾಮಶಾಹಿ ಕಪಿ ಮುಷ್ಠಿಯಿಂದ ಬಿಡುಗಡೆಗೊಂಡಿತು, ಹೋರಾಟ ಮಾಡಿದ ನಾಯಕರ ರಾಷ್ಟ್ರ ಪ್ರೇಮ ನಮ್ಮೆಲ್ಲರ ಬದುಕಿಗೆ ಪ್ರೇರಣೆಯಾಗಬೇಕು ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.
ಅವರು ಶನಿವಾರ ನಗರದ ಸರಕಾರಿ ಬಾಲಕರ ಪ್ರೌಢಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲ್ಲಿ ಮಾತನಾಡಿದರು.
ದೇಶದಲ್ಲಿ ಭ್ರಷ್ಟಾಚಾರ,ಅನೈತಿಕತೆಗಳು ತಾಂಡವವಾಡುತ್ತಿದ್ದು ಇದನ್ನು ತೊಲಗಿಸಿ ಮಾನವೀಯ ಗುಣಗಳನ್ನು ಬೆಳೆಸಬೇಕು.ಅನ್ಯಾಯಗಳ ವಿರುದ್ಧ ಧ್ವನಿ ಎತ್ತಿ ಸತ್ಯಕ್ಕಾಗಿ ಹೋರಾಟ ಮಾಡಬೇಕಾಗಿದೆ. ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರನ್ನು ಸ್ಮರಿಸುವ ಮೂಲಕ ಎರಡನೇ ಸ್ವತಂತ್ರೋತ್ಸವವನ್ನು ಅರ್ಥ ಗರ್ಭಿತಗೊಳಿಸಬೇಕೆಂದು ಹೇಳಿದರು.
ನಗರಸಭೆಯ ಪೌರಾಯುಕ್ತ ಅಶೋಕ ಬಿಲಗುಂದಿ ಮಾತನಾಡಿ, ರಾಷ್ಟ್ರಪ್ರೇಮ, ದೇಶಾಭಿಮಾನ ,ನಮ್ಮ ನಾಡು ನುಡಿಗಳ ಬಗ್ಗೆ ಅಭಿಮಾನ ಬೆಳೆಸಿಕೊಂಡಾಗ ಮಾತ್ರ ಈ ಭಾಗದ ಸ್ವಾತಂತ್ರ್ಯಕ್ಕೆ ಬೆಲೆ ಬರುತ್ತದೆ. ಸಹಸ್ರಾರು ಜನರ ಹೋರಾಟದ ಫಲವಾಗಿ ದೊರಕಿರುವ ಸ್ವಾಂತಂತ್ರ್ಯದ ಮಹತ್ವವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕೆಂದು ಹೇಳಿದರು.
ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ, ನಗರಸಭೆಯ ಸದಸ್ಯೆ ಸಾಬೇರಾಬೇಗಂ, ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ, ತಾಪಂ ಇಓ ಬಸಲಿಂಗಪ್ಪ ಡಿಗ್ಗಿ, ಸರಕಾರಿ ಪದವಿ ಪೂರ್ವ ಕಾಲೇಜಿ ಪ್ರಾಂಶುಪಾಲ ಶಮಶೋದ್ದಿನ್ ಪಟೇಲ್, ಸರಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಗುರು ಏಮನಾಥ ರಾಠೋಡ, ಎಸ್‍ಡಿಎಮ್‍ಸಿ ಅಧ್ಯಕ್ಷ ನರಸಿಂಗ, ಶಿಕ್ಷಕರಾದ ಸಾಲೆಹಾ ಸಮೀನಾ, ವಿಜಯಲಕ್ಷ್ಮಿ,ವಾಣಿಶ್ರೀ, ಸಾವಿತ್ರಿ, ಅಂಜುಮ ಫರಕಂದಾ, ಪುμÁ್ಪ, ಸಾಹಿನ ಸುಲ್ತಾನಾ, ಅಜರಾ ಸುಲ್ತಾನಾ, ಪುμÁ್ಪವತಿ ಹಾಗೂ ಶಾಲಾಮಕ್ಕಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…