ಕಲಬುರಗಿ: ಮುಂದಿನ ರಾಜ್ಯ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 5 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.
ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ, 3 ಸಾವಿರ ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಕಳೆದ ಬಜೆಟ್‍ನಲ್ಲಿ ಮೂರು ಸಾವಿರ ಕೋಟಿ ರೂ. ನೀಡಲಾಗಿತ್ತು. ಮುಂದಿನ ಬಜೆಟ್ ನಲ್ಲಿ 5 ಸಾವಿರಕ್ಕೆ ಹೆಚ್ಚಿಸಲಾಗುವುದು. ಈ ಮೂಲಕ ಈ ಕಲ್ಯಾಣ ಕರ್ನಾಟಕ ನಿರಂತರವಾಗಿ ಅಭಿವೃದ್ಧಿಯಾಗಬೇಕು ಎಂದು ಅವರು ಒತ್ತಿ ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ವಿವಿಧ 15,000 ಖಾಲಿ ಹುದ್ದೆಗಳನ್ನು ಮುಂದಿನ ಮಾರ್ಚ್‍ನೊಳಗೆ ಭರ್ತಿ ಮಾಡುವುದಾಗಿ ತಿಳಿಸಿದ ಅವರು, ಈ ಪೈಕಿ 5 ಸಾವಿರ ಶಿಕ್ಷಕರನ್ನೂ ಮಾರ್ಚ್‍ನಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ನವ ಕಲ್ಯಾಣ ಕರ್ನಾಟಕವಾಗಬೇಕು. ನಂತರ ನವ ಕರ್ನಾಟಕವಾಗಬೇಕು. ಈ ಮೂಲಕ ನವ ಭಾರತ ನಿರ್ಮಾಣದ ಸಂಕಲ್ಪ ಹೊಂದಬೇಕು ಎಂದು ಅವರು ಪ್ರತಿಪಾದಿಸಿದರು.
ವಿಶ್ವದ ಮೊದಲ ಸಂಸತ್ತು ಯುರೋಪ್ ಎಂದು ಹೇಳಗಾಗುತ್ತಿತ್ತು. ಆದರೆ, ಕಲ್ಯಾಣ ಕರ್ನಾಟಕದಲ್ಲಿ 12ನೇ ಶತಮಾನದ ಜಗಜ್ಯೋತಿ ಬಸವಣ್ಣನವರ ಅನುಭವ ಮಂಟಪವೇ ವಿಶ್ವದ ಮೊದಲ ಸಂಸತ್ತು. ಇದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಇಚ್ತೀಚೆಗೆ ಸಂಸತ್ತಿನ ನೂತನ ಕಟ್ಟಡ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದರು ಎಂದು ಅವರು ಹೆಮ್ಮೆಯಿಂದ ನುಡಿದರು.
ಕಲಬುರಗಿ ನಗರದಲ್ಲಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಪೂರ್ಣಗೊಳಿಸಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆ ಗೊಳಿಸಲಾಗುವುದು ಎಂದು ಅವರು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ಅವರು ಮಾತನಾಡಿ, ಈ ಹಿಂದಿನ ಬಜೆಟ್‍ನಲ್ಲಿ ಮಂಡಳಿಗೆ 3000 ಕೋಟಿ ರೂಪಾಯಿ ಕೊಟ್ಟಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾಡಿಹೊಗಳಿದರು.
ಸರ್ದಾರ್ ವಲ್ಲಭಭಾಯ್ ಪಟೇಲ್ ಅವರನ್ನು ಉಕ್ಕಿನ ಮನುಷ್ಯ ಎಂದು ಕರೆಯಲಾಗುತ್ತಿತ್ತು. ಅದೇ ರೀತಿ ಕರ್ನಾಟಕದ ಉಕ್ಕಿನ ಮನುಷ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ಅವರು ಗುಣಗಾನ ಮಾಡಿದರು.
ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವ ಭಗವಂತ ಖೂಬಾ, ಕಲಬುರಗಿ ಸಂಸದ ಡಾ. ಉಮೇಶ ಜಾಧವ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಲಾಯಿತು.
ಕಲ್ಯಾಣ ಕರ್ನಾಟಕ ಸಾಹಿತ್ಯ ಸಂಸ್ಕøತಿ ಮಾಲೆಯ ಗ್ರಂಥಗಳ ಬಿಡುಗಡೆ ಹಾಗೂ ದಿ. ಶ್ರೀ ಚಂದ್ರಶೇಖರ್ ಪಾಟೀಲ್ ಮಹಾಗಾಂವ್ ಇವರುಗಳ ಜೀವನ ಚರಿತ್ರೆ ಪುಸ್ತಕಗಳನ್ನೂ ಬಿಡುಗಡೆಗೊಳಿಸಲಾಯಿತು. ತೊಗರಿ ಅಭಿವೃದ್ಧಿ ಮಂಡಳಿಯ ಭೀಮಾ ಫಲ್ಸ್ ಕೂಡ ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.
ಗೃಹ ಸಚಿವ ಆರಗ ಜ್ಞಾನೇಂದ್ರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ವಿಧಾನಸಭೆ ಶಾಸಕರುಗಳಾದ ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ವಿದ್ಯಾಸಾಗರ ಎ. ಶಹಾಬಾದಿ, ಕಲಬುರಗಿ ನೀರಾವರಿ ಯೋಜನೆಗಳ ವಲಯದ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಗಳೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ. ಫಹೀಂ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಮತ್ತು ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿ ಕೃಷ್ಣ ಬಾಜಪೇಯಿ, ಡಿ.ಸಿ.ಯಶವಂತ ವಿ. ಗುರುಕರ್, ಜಿಲ್ಲಾ ಪಂಚಾಯತ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಜೆಸ್ಕಾಂ ಎಂ.ಡಿ.ರಾಹುಲ ಪಾಂಡ್ವೆ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ದೇವಿದಾಸ ಪಾಟೀಲ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತೆ ಗರಿಮಾ ಪನ್ವಾರ, ಹೈದ್ರಾಬಾದ ಕರ್ನಾಟಕ ಪ್ರದೇಶ ಇತಿಹಾಸ ರಚನಾ ಸಮಿತಿಯ ಸದಸ್ಯ ಕಾರ್ಯದರ್ಶಿ ಲಕ್ಷ್ಮಣ ದಸ್ತಿ, ಕೆ.ಕೆ.ಆರ್.ಡಿ.ಬಿ. ಜಂಟಿ ಕಾರ್ಯದರ್ಶಿ ಪ್ರವೀಣ ಪ್ರಿಯಾ ಡೇವಿಡ್ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.
ವಸ್ತು ಪ್ರದರ್ಶನ ಉದ್ಘಾಟನೆ: ಇದಕ್ಕೂ ಮೊದಲು ಕಾರ್ಯಕ್ರಮದ ಸ್ಥಳದಲ್ಲಿ ನಿರ್ಮಿಸಲಾದ ಕಲ್ಯಾಣ ಕರ್ನಾಟಕದ ಅತಿದೊಡ್ಡ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮುಖ್ಯಮಂತ್ರಿಗಳು ವಿದ್ಯುಕ್ತವಾಗಿ ಉದ್ಘಾಟಿಸಿದರು. 180ಕ್ಕೂ ಹೆಚ್ಚಿನ ಮಳಿಗೆಗಳನ್ನೂ ಸ್ಥಾಪಿಸಿದ್ದು, ಸೆ.15 ರಿಂದ 17ರ ವರೆಗೆ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಈ ಭಾಗದ ಜಿಲ್ಲೆಗಳ ಭೌಗೋಳಿಕ ಮತ್ತು ಸ್ಥಳೀಯವಾಗಿ ಮಹತ್ವ ಪಡೆದಿರುವ ವಸ್ತುಗಳನ್ನು ಇಲ್ಲಿ ಮಾರಾಟ ಮಾಡಲಾಗಿದ್ದು, ಸಹಸ್ರ-ಸಹಸ್ರ ಜನರು ವೀಕ್ಷಿಸಿ ವಸ್ತುಗಳನ್ನು ಖರೀದಿಸಿದ್ದು ಕಂಡು ಬಂತು. ಈ ಮೂಲಕ ಸ್ಥಳೀಯ ಕಲಾವಿದರು ಹಾಗೂ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…