ಬಿಸಿ ಬಿಸಿ ಸುದ್ದಿ

ಕಪ್ಪುಹಣ ತರುವ ಬದಲು ಚೀತಾ ಹಿಡಿದುಕೊಂಡು ಬಂದಿದ್ದಾರೆ: ಮಾಜಿ‌ ಸಚಿವ ಶರಣಪ್ರಕಾಶ ಪಾಟೀಲ ವ್ಯಂಗ್ಯ

ವಾಡಿ (ಚಿತ್ತಾಪುರ):  ವಿದೇಶದಲ್ಲಿರುವ ಕಪ್ಪುಹಣ ತರುತ್ತಾರೆ ಎಂದು ವಾಗ್ಧಾನ ಮಾಡಿದ್ದ ಮೋದಿ ಕಪ್ಪು ಹಣ ತರುವ ಬದಲು ವಿದೇಶದಿಂದ ಚೀತಾ ಹಿಡಿದುಕೊಂಡು‌ ಬಂದು ಭಾರೀ ಸಾಧನೆ ಮಾಡಿದವರ ತರ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ವ್ಯಂಗ್ಯವಾಡಿದರು.

ವಾಡಿ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಯುವಗರ್ಜನೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ವಿದೇಶದಿಂದ ಕಪ್ಪು ಹಣ ತರುವುದಾಗಿ, ರೈತರ ಆದಾಯ ದ್ವಿಗುಣ ಮಾಡುವುದಾಗಿ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ಹದಿನೈದು ಲಕ್ಷ ಹಣ ಹಾಕುವುದಾಗಿ ಹೇಳಿದ್ದ, ಪ್ರತಿವರ್ಷ ಎರಡು ಕೋಟಿ ಉದ್ಯೋಗ ಕೊಡುವುದಾಗಿ ಮಾತು ಕೊಟ್ಟಿದ್ದ ಮೋದಿ ತಮ್ಮ ಮಾತು ಮರೆತು ಮೋಸ ಮಾಡಿದ್ದಾರೆ. ಯಾವ ಮುಖವಿಟ್ಟುಕೊಂಡು ಮತ್ತೆ ಮತ ಕೇಳಲು ಬರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾಸ್ ಸಿಲೆಂಡರ್ ದರ ಮೂರು ಪಟ್ಟು ಹೆಚ್ಚಾಗಿದೆ. ದಿನಬಳಕೆ‌ ವಸ್ತುಗಳ ದರ ಗಗನಕ್ಕೇರಿದೆ. ರೈತರ ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಬಡವರ ರೈತರ ವಿರೋಧ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದೆ. 2023 ರ ಚುನಾವಣೆ ಅತ್ಯಂತ ಪ್ರಮುಖವಾದ ಚುನಾವಣೆ ಈ ಭ್ರಷ್ಟ ಸರ್ಕಾರವನ್ನು ನೀವು ಕಿತ್ತೊಗೆಯಬೇಕು ಎಂದು ಮನವಿ ಮಾಡಿದರು.

ಬಿಜೆಪಿಯ ಖದೀಮರೆಲ್ಲ ಸೇರಿ ಪ್ರಿಯಾಂಕ್ ಖರ್ಗೆಯನ್ನು ಸೋಲಿಸಲು ಪ್ರಯತ್ನಿಸುತ್ತಿದ್ದಾರೆ ಅವರ ಪ್ರಯತ್ನ ಫಲಿಸದಂತೆ ನೀವು ನೋಡಿಕೊಳ್ಳಬೇಕು. ಅವರನ್ನ ನೀವು ಗೆಲ್ಲಿಸುವ ಮೂಲಕ ಮತ್ತಷ್ಟು ಅಭಿವೃದ್ದಿಗೆ ದಾರಿ ಮಾಡಿಕೊಡಬೇಕು ಎಂದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago