ಬಿಸಿ ಬಿಸಿ ಸುದ್ದಿ

ಹರಳಯ್ಯ ಸಮಾಜದಿಂದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ

ಕಲಬುರಗಿ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಆರೋಗ್ಯ ಮತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಹಲವಾರು ಯೋಜನೆಗಳು ಜಾರಿಗೆ ತಂದಿವೆ. ಶಾಲಾ-ಕಾಲೇಜು ಮಕ್ಕಳು, ಯುವಕರು ಸೌಲಭ್ಯ ಪಡೆದು ಉನ್ನತ ಶಿಕ್ಷಣ ಪಡೆದು ಪ್ರಗತಿ ಸಾಧಿಸಬೇಕು ಎಂದು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶ್ರೀ ಶಿವಶರಣ ಹರಳಯ್ಯ ಸಮಗಾರ (ಮಚಗಾರ) ಸಮಾಜದ ಕಲಬುರಗಿ ಜಿಲ್ಲಾ ಘಟಕದಿಂದ ರವಿವಾರ ಕಲಬುರಗಿ ನಗರದ ರಾಮ ಮಂದಿರ ಪ್ರದೇಶದ ಮಾನಕರ್ ಲೇಔ???ನಲ್ಲಿರುವ ಸಮಾಜದ ಭವನದಲ್ಲಿ ಆಯೋಜಿಸಿದ ಪ್ರತಿಭಾ ಪುರಸ್ಕಾರ ಕಾರ್ಯರಮವನ್ನು ಶಿವಶರಣ ಸಮಗಾರ ಹರಳಯ್ಯ, ಬುದ್ಧ, ಬಸವ ಹಾಗೂ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮತ್ತು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದಲ್ಲದೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಕಲಬುರಗಿಗೆ ಭೇಟಿ ನೀಡಿದಾಗ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಸಲಾದ ೧೦ ಕೋಟಿ ರೂ. ವೆಚ್ಚದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಕಟ್ಟಡ ಉದ್ಗಾಟಿಸಿದ್ದಾರೆ. ಇದು ಸ್ಥಳೀಯ ವಿದ್ಯಾರ್ಥಿಗಳು- ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ತುಂಬ ನೆರವಾಗಲಿದೆ. ಇಂದು ಸ್ಪರ್ಧಾತ್ಮಕ ಯುಗವಾಗಿದ್ದು, ಉದ್ಯೋಗ ಪಡೆಯಬೇಕಾದಲ್ಲಿ ಉನ್ನತ ಶಿಕ್ಷಣ ಪಡೆಯುವುದು ಅವಶ್ಯಕ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಸಮಾಜದ ಸಮುದಾಯ ಭವನದ ಉಳಿದ ಕಾಮಗಾರಿಗೆ ೨.೫ ಕೋಟಿ ರೂ. ನೀಡಲು ಈಗಾಗಲೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಪ್ರಸ್ತುತ ವಿದಾನಮಂಡಲದ ಅಧಿವೇಶನ ನಡೆಯುತ್ತಿದ್ದು, ಇದು ಮುಗಿದ ಕೂಡಲೆ ಸಿ.ಎಂ. ಬಳಿಗೆ ಜಿಲ್ಲಾ ಸಮಾಜದ ನಿಯೋಗವನ್ನು ಕರೆದುಕೊಂಡು ಹೋಗಿ, ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಬೆಂಗಳೂರು ಡಿ.ಆರ್.ಡಿ.ಓ ಹಿರಿಯ ವಿಜ್ಞಾನಿ ಡಿ.ಜಿ.ರಾವ್ ಮಾತನಾಡಿ, ನಮ್ಮ ಸಮಾಜ ಅತ್ಯಂತ ಸಣ್ಣ ಮತ್ತು ಹಿಂದುಳಿದ ಸಮಾಜವಾಗಿದೆ. ಇದರ ನಡೆವೆಯೂ ಮಕ್ಕಳಿಗೆ ಪ್ರತಿ ವರ್ಷ ಪ್ರತಿಭಾ ಪುರಸ್ಕಾರ ಆಯೋಜಿಸುತ್ತಿರುವುದು ಸಂತಸ ತಂದಿದೆ. ಪ್ರಗತಿಗೆ ಶಿಕ್ಷಣವೇ ಮಾರ್ಗ ಎಂದ ಅವರು ನಾವು ಇಲ್ಲದಿದ್ದರು ನಮ್ಮ ಸಾಧನೆ ಮಾತನಾಡಬೇಕು. ಆ ನಿಟ್ಟಿನಲ್ಲಿ ನಾವು ಸಾಗಬೇಕು ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ಮಾತನಾಡಿದರು.

೭೮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ೨೦೨೧-೨೨ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಹೆಚ್ಚಿನ ಅಂಕ ಪಡೆದ ಕ್ರಮವಾಗಿ ೫೮ ಮತ್ತು ೨೦ ವಿದ್ಯಾರ್ಥಿಗಳಿಗೆ ಗಣ್ಯರಿಂದ ನೆನಪಿನ ಕಾಣಿಕೆ, ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.

ಪ್ರಭು ಹರಸೂರ ಸೇರಿ ಮೂವರಿಗೆ ವಿಶೇಷ ಸನ್ಮಾನ: ನವದೆಹಲಿಯ ಕೇಂದ್ರ ಚಿತ್ರಕಲಾ ಅಕಾಡೆಮಿಯಿಂದ ಚಿತ್ರಕಲಾ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತುಮಕೂರು ರವಿಂದ್ರ ಕಲಾನಿಕೇತನ ಪ್ರಾಚಾರ್ಯ ಪ್ರಭು ಹರಸೂರ ಮತ್ತು ೨೦೨೨ನೇ ಸಾಲಿನ ಕಲಬುರಗಿ ಜಿಲ್ಲಾ ಮಟ್ಟದ ಸರ್ವೋತ್ತಮ ನಾಗರಿಕ ಸೇವಾ ಪ್ರಶಸ್ತಿ ಪುರಸ್ಕೃತ ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರವಿ ಎ. ಮಿರಸ್ಕರ್ ಹಾಗೂ ಹೆಬ್ಬಾಳ ಗ್ರಾಮ ಪಂಚಾಯತ ಅಧ್ಯಕ್ಷ ನಾಗರಾಜ ಬಿ. ದಿವಂಟಗಿ ಅವರನ್ನು ಇದೇ ಸಂದರ್ಭದಲ್ಲಿ ಗಣ್ಯರು ವಿಶೇಷವಾಗಿ ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಜಿಲ್ಲಾಧ್ಯಕ್ಷ ಕಾಶಿರಾಯ ನಂದೂರಕರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಅರ್ಚನಾ ಬಸವರಾಜ ಬಿರಾಳ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ಮಲ್ಲಿಕಾರ್ಜುನ ಜೇರಟಗಿ, ಬಾಲು ಶೇಟ್, ಜಗದೀಶ ಪಾಟೀಲ, ಮಣಿಕಂಠ ರಾಠೋಡ, ಶಿವಕುಮಾರ ಪಾಟೀಲ ಜಂಬಗಾ, ಜಿಲ್ಲಾ ಘಟಕದ ಪದಾಧಿಕಾರಿಗಳಾದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಡಾ.ಅಂಬಾರಾಯ ರುದ್ರವಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರಾಮಚಂದ್ರ ಎಚ್.ಗೋಳಾ, ಶಿವಶರಣಪ್ಪ ಜಿ. ದೊಡ್ಮನಿ, ಶಿವರಾಯ ಎಸ್. ಕಟ್ಟಿಮನಿ, ಬಸವರಾಜ ಶೆಳ್ಳಗಿ, ಪುಂಡಲಿಕ್ ಎಸ್. ಟೆಂಗಳಿ, ಕಾಶಿನಾಥ ದಿವಟಗಿ, ಉಮಾಕಾಂತ ಎ. ಕೂಡಿ, ಮಹಾದೇವ ಆರ್.ಮುದ್ದಡಗಿ, ಗೋಪಾಲ ಬಿ. ತೆಗನೂರ, ಹಣಮಂತ ಭಾವಿಮನಿ, ಮಹೇಶ ಗುತ್ತೇದಾರ ಸೇರಿದಂತೆ ಇನ್ನಿತರ ಪದಾಧಿಕಾರಿಗಳು, ಸಮಾಜದ ಮುಖಂಡರು, ಬಾಂಧವರು ಹಾಗೂ ಮಕ್ಕಳು ಮತ್ತು ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಜಿಲ್ಲಾ ಸಮಾಜದ ಸಲಹೆಗಾರ ಸಿದ್ಧಣ್ಣ ಭಾವಿಮನಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಜಟ್ಟಿಂಗರಾಯ ಶಾಖಾಪೂರೆ ಸ್ವಾಗತಿಸಿದರೆ, ಸಹ ಕಾರ್ಯದರ್ಶಿ ಶ್ರೀಮಂತ ಜೇವರ್ಗಿ ವಂದಿಸಿದರು. ಪ್ರಧಾನ ಕಾರ್ಯದರ್ಶಿ ವೀರಭದ್ರಪ್ಪ ಹೆಬ್ಬಾಳ ನಿರೂಪಿಸಿದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

7 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

7 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

7 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

7 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

7 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

7 hours ago