ಕಲಬುರಗಿ: ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರಾಗಿದ್ದ ಶೇಖ್ ಯೂನೂಸ್ ಅಲಿ (60) ಇವರು ತೀವ್ರ ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ.
ಇವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಮಂಗಳವಾರ ಮಧ್ಯಾಹ್ನ 1. 30 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಲು ಹೇಳಿವೆ. ಇವರು 4 ಗಂಡು, 3 ಹೆಣ್ಣು ಮಕ್ಕಳು ಹಾಗೂ ಪತ್ನಿ, ಬಂಧುಗಳು, ಅಭಿಮಾನಿಗಳನ್ನು ಅಗಲಿದ್ದಾರೆ. ಶಾಸಕರಾದ ಪ್ರಿಯಾಂಕ್ ಖರ್ಗೆ, ಡಾ. ಅಜಯ್ ಸಿಂಗ್, ಮಾಜಿ ಎಂಎಲ್‍ಸಿ ಅಲ್ಲಂಪ್ರಭು ಪಾಟೀಲ್, ಶಾಸಕಿ ಕನೀಜ್ ಫಾತೀಮಾ ಶೇಖ್ ಯೂನುಸ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಶೇಖ್ ಯೂನುಸ್ ನಿಧನದಿಂದ ಪಕ್ಷಕ್ಕೆ ನಗರದಲ್ಲಿ ಉತಂಬಲಾರದ ನಷ್ಟವಾಗಿದೆ. ದೇವರು ಇವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಇವರು ಪ್ರಾರ್ಥಿಸಿದ್ದಾರೆ.