ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕ ಕಮಲಾಪುರ ವತಿಯಿಂದ ಕಲ್ಯಾಣ ಕರ್ನಾಟಕೋತ್ಸವದ ಪ್ರಯುಕ್ತ ಕಲ್ಯಾಣ ಶಿಕ್ಷಣ ವಿಶೇಷ ಉಪನ್ಯಾಸವನ್ನು ಕಮಲಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೆಪ್ಟೆಂಬರ್ 21ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಮಲಾಪುರ ಕಸಾಪ ನೂತನ ತಾಲೂಕು ಅಧ್ಯಕ್ಷ ಸುರೇಶ ಲೇಂಗಟಿ ತಿಳಿಸಿದ್ದಾರೆ.
ಕಮಲಾಪುರ ತಹಶಿಲ್ದಾರ ಸುರೇಶ ವರ್ಮಾ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶಶಿಕಲಾ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಶಯ ನುಡಿಗಳನ್ನು ಮತ್ತು ಜಿಲ್ಲಾ ಕಸಾಪ ಸಂಘ ಸಂಸ್ಥೆ ಪ್ರತಿನಿಧಿ ಕಲ್ಯಾಣಕುಮಾರ ಶೀಲವಂತ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ನಿವೃತ್ತ ಶಿಕ್ಷಕ ಪುಂಡಲಿಕರಾವ ಚಿರಡೆ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಮಿಟ್ಟೇಸಾಬ ಮುಲ್ಲಾ,ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರ ಓಕಳಿ, ಕಮಲಾಪುರ ಸರಕಾರಿ ಪ್ರೌಢಶಾಲಾ ಸಂಘದ ಅಧ್ಯಕ್ಷ ಪ್ರಕಾಶ ನರೋಣಾ, ಕಸಾಪ ತಾಲೂಕು ಗೌರವ ಜಾರ್ಯದರ್ಶಿ ರವೀಂದ್ರ ಬಿ ಕೆ, ಕೋಶಾಧ್ಯಕ್ಷ ನಾಗಣ್ಣ ವಿಶ್ವಕರ್ಮ ಭಾಗವಹಿಸಲಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…