ಬಿಸಿ ಬಿಸಿ ಸುದ್ದಿ

ಕ್ರೀಡೆಯಿಂದ ಸಮತೋಲಿತ ಜೀವನ ಸಾಧ್ಯ: ಅರವಿಂದ ಭಾಸಗಿ

ಆಳಂದ: ಜೀವನದಲ್ಲಿ ದೈಹಿಕ ಕಸರತ್ತು ಮಾಡುವುದರೊಂದಿಗೆ ಕ್ರೀಡೆಗಳನ್ನು ಆಡುವುದರಿಂದ ಸಮತೋಲಿತ ಜೀವನ ನಡೆಸಲು ಸಾಧ್ಯ ಎಂದು ತಾಲೂಕಾ ದೈಹಿಕ ಶಿಕ್ಷಣಾಧಿಕಾರಿ ಅರವಿಂದ ಭಾಸಗಿ ಅಭಿಪ್ರಾಯಪಟ್ಟರು.

ಸೋಮವಾರ ಪಟ್ಟಣದ ತಾಲೂಕಾ ಸರ್ಕಾರಿ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಮ್ಮಿಕೊಂಡಿದ್ದ ಪದವಿ ಪೂರ್ವ ಕಾಲೇಜುಗಳ ತಾಲೂಕಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮ ಪಡಿಸುತ್ತವೆ ಅಲ್ಲದೇ ನಮ್ಮನ್ನು ಸದಾಕಾಲ ಕ್ರೀಯಾಶೀಲವಾಗಿಡಲು ಸಹಕರಿಸುತ್ತವೆ ಹೀಗಾಗಿ ದಿನನಿತ್ಯದ ಜೀವನದ ಭಾಗದಲ್ಲಿ ಒಂದು ಸಮಯವನ್ನು ಕ್ರೀಡೆಗಾಗಿ ಮೀಸಲಿಡಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಶಶಿಕಾಂತ ಮೇತ್ರೆ, ರಾಣಪ್ಪ ಸಂಗನ, ಶಿವಕುಮಾರ ಕರಹರಿ, ಶಿವಶರಣಪ್ಪ ಗುಬ್ಬನ, ಮಲ್ಲಿನಾಥ ಖಜೂರಿ, ಸಲೀಂ ಶಿರೂರ, ಮಲ್ಲಿಕಾರ್ಜುನ ಬುಕ್ಕೆ ಭಾಗವಹಿಸಿದ್ದರು.

ಎಂಎಆರ್‍ಜಿ ಪಿಯು ಕಾಲೇಜು ಪ್ರಾಚಾರ್ಯ ಡಾ. ಅಪ್ಪಾಸಾಬ ಬಿರಾದಾರ ಕ್ರೀಡಾಧ್ವಜ ನೇರವೇರಿಸಿದರು. ಶಶಿಕಾಂತ ಮೇತ್ರೆ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಉಪನ್ಯಾಸಕ ಶಿವಾನಂದ ಕಲಮಂಥಣಿ ಸ್ವಾಗತಿಸಿದರೆ, ಮಲ್ಲಿಕಾರ್ಜುನ ಶೃಂಗೇರಿ ವಂದಿಸಿದರು. ಶರಣಬಸಪ್ಪ ವಡಗಾಂವ ಪ್ರತಿಜ್ಞಾವಿಧಿ ಬೋಧಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago