ಕಲಬುರಗಿ: ಶ್ರೀರಾಮ ಸೇನೆಯಿಂದ ಜಿಲ್ಲೆಯ ಜೇವರ್ಗಿ ಪಟ್ಟಣದ ಅಖಂಡೇಶ್ವರ ಎ.ಪಿ.ಎಂ.ಸಿ ಯಾರ್ಡ್ ಮತ್ತು ಗಣೇಶ ಚೌಕ್ ನಲ್ಲಿ ಪ್ರತ್ಯೇಕವಾಗಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳ ವಿಸರ್ಜನೆ ಇದೇ ಸೆ.21 ರಂದು ನಡೆಯಲಿರುವ ಕಾರಣ ಕಾನೂನು ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡುವ ದೃಷ್ಠಿಯಿಂದ ಸೆ.20ರ ಬೆಳಿಗ್ಗೆ 6 ಗಂಟೆಯಿಂದ ಸೆ.21ರ ಮಧ್ಯರಾತ್ರಿ 12 ಗಂಟೆ ವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ಮುತಾಲಿಕ್ ಸೇರಿದಂತೆ ನಾಲ್ವರ ಸಾರ್ವಜನಿಕ ಭಾಷಣ ನಿರ್ಬಂಧಿಸಿ ಡಿ.ಸಿ. ಯಶವಂತ ವಿ. ಗುರುಕರ್ ಸೋಮವಾರ ಆದೇಶಿಸಿದ್ದಾರೆ.
ಪ್ರಮೋದ ತಂದೆ ಹಣಮಂತರಾವ ಮುತಾಲಿಕ್ ಸೇರಿದಂತೆ ಕುಂದಾಪುರಿನ ಕು. ಚೈತ್ರಾ ತಂದೆ ಬಾಲಕೃಷ್ಣ ನಾಯಕ, ಕು.ಹಾರಿಕಾ ಮಂಜುನಾಥ ಹಾಗೂ ಶ್ರೀ ಕಾಳಿ ಶ್ರೀಸ್ವಾಮಿಗಳು ಸಾರ್ವಜನಿಕವಾಗಿ ಯಾವುದೇ ಭಾಷಣ ಮಾಡದಂತೆ ಸಿ.ಆರ್.ಪಿ.ಸಿ. ಕಾಯ್ದೆ-1973ರ ಸೆಕ್ಷನ್ 133, 143 ಹಾಗೂ 144ರನ್ವಯ ನಿರ್ಬಂಧಿಸಿ ಆದೇಶಿಸಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…