ರೈತರ ಸಬ್ಸಿಡಿಯಲ್ಲೂ ಕಮಿಷನ್: ರಾಜ್ಯದ ಈಗಿನ ಸರ್ಕಾರದಲ್ಲಿ ಭ್ರಷ್ಟ ವ್ಯವಸ್ಥೆ ಬಗ್ಗೆ ಜನಸಾಮಾನ್ಯರು ಚರ್ಚೆ ಮಾಡುತ್ತಿದ್ದಾರೆ. ನಲವತ್ತು ಪರ್ಸೆಂಟೇಜ್ ಚರ್ಚೆ ಬಗ್ಗೆ ಎಲ್ಲರಿಗೂ ಗೊತ್ತಿದೆ. ರೈತರಿಗೆ ನೀಡುವ ಸಬ್ಸಿಡಿಯಲ್ಲಿ ಕೂಡಾ ಕಮಿಷನ್ ಪಡೆಯುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕಲಬುರಗಿ: ಆಕ್ರಮದಲ್ಲಿ ಸಿಲುಕಿರು ಸಚಿವರೊಬ್ಬರ ಆಕ್ರಮವನ್ನು ನಾಳೆ ಸದನದಲ್ಲಿ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಹೇಳಿದ್ದಾರೆ.
ಅವರು ಬುಧವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ನನ್ನನ್ನು ಏಕವಚನದಲ್ಲಿ ಮಾತನಾಡಿದ ಆ ಸಚಿವರಿಗೆ ಸ್ಯಾಂಪಲ್ ನಾಳೆ ದಾಖಲೆ ಬಿಡುಗಡೆ ಮಾಡುವೆ. ಇನ್ನೂ ಹಲವು ದಾಖಲೆಗಳು ಇವೆ.
ಸದನದಲ್ಲಿ ಒಂದು ವಿಷಯಕ್ಕೆ ಸಂಬಂಧಿಸಿದಂತೆ ನಿಲುವಳಿ ಸೂಚನೆ ಮಾಡಿದ್ದೇವೆ ನಾಳೆ ಯಾವ ವಿಷಯ ಅಂತ ಗೊತ್ತಾಗುತ್ತದೆ ಸರ್ಕಾರದ ಸ್ವೇಚ್ಚಾಚಾರ, ಕಾನೂನು ಬಾಹಿರ ತೀರ್ಮಾನ ಬಗ್ಗೆ ಕಲಾಪದಲ್ಲಿ ಚರ್ಚೆ ಮಾಡುತ್ತೇವೆ. ಹೆಚ್ ಡಿಕೆ ಹಿಟ್ ಆಂಡ್ ರನ್, ಗಾಳಿ ಯಲ್ಲಿ ಗುಂಡು ಹೊಡೆಯೋದು ಇಲ್ಲಾ. ನನ್ನನ್ನು ಓರ್ವ ಸಚಿವ ಕೆಣಕಿದ್ದಾರೆ. ಏನು ಮಾಡ್ತಾರೆ ಕುಮಾರಸ್ವಾಮಿ ಅಂತ ಹೇಳಿದ್ದಾರೆ. ಅದರ ಒಂದು ಶ್ಯಾಂಪಲ್ ನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದರು.
ಶಿವಮೊಗ್ಗದಲ್ಲಿ ಶಂಕಿತ ಉಗ್ರರು ಪತ್ತೆ ವಿಚಾರ: ಶಿವಮೊಗ್ಗದಲ್ಲಿ ಶಂಕಿತ ಉಗ್ರರು ಪತ್ತೆ ಚಟುವಟಿಕೆ ಪ್ರಾರಂಭವಾಗಿರುವ ವಿಚಾರವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಈ ವಿಚಾರವಾಗಿ ಸರ್ಕಾರದ ಇಂಟಲಿಜೆನ್ಸ್ ದೊಡ್ಡ ಮಟ್ಟದಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ಇಂತಹ ಘಟನೆಗಳು ನಮ್ಮ ರಾಜ್ಯಕ್ಕೆ ಒಳ್ಳೆಯದಲ್ಲಾ. ಇಂತಹ ಶಕ್ತಿಗಳನ್ನು ಮಟ್ಟಹಾಕುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಇದೆ ವೇಳೆ ಆಗ್ರಹಿಸಿದ್ದಾರೆ.
ಹೆಚ್ ಡಿಡಿ ಆರೋಗ್ಯ ವಿಚಾರಣೆ: ದೇವೇಗೌಡರನ್ನು ಅನೇಕ ರಾಜಕೀಯ ನಾಯಕರ ಭೇಟಿ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಅವರು, ದೇವೆಗೌಡರ ಆರೋಗ್ಯದ ಬಗ್ಗೆ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ ಅಷ್ಟೆ ಅದರಲ್ಲಿ ಯಾವುದೇ ರಾಜಕೀಯ ಇಲ್ಲಾ ಅವರು ಆರೋಗ್ಯದಿಂದ ಇದ್ದಾರೆ ಎಂದು ಹೇಳಿದರು.
ಸಿದ್ದು ಸರ್ಕಾರದಲ್ಲೂ ಭ್ರಷ್ಟಾಚಾರ: ಇಂದಿನ ಸರ್ಕಾರ ಮಾತ್ರವಲ್ಲ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲೂ ಕೂಡಾ ಭ್ರಷ್ಟಾಚಾರ ನಡೆದಿತ್ತು. ಕಾಂಗ್ರೆಸ್ ಸರ್ಕಾರಲ್ಲಿ ಕೂಡಾ ಬಹಳಷ್ಟು ಭ್ರಷ್ಟಾಚಾರ ನಡೆದಿವೆ ಎಂದು ದೂರಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…