ಬಿಸಿ ಬಿಸಿ ಸುದ್ದಿ

ಸುರಪುರ: ನಗರಸಭೆ ಹೊರಗುತ್ತಿಗೆ ಪೌರ ಕಾರ್ಮಿಕರ ಖಾಯಂಗೊಳಿಸಲು ಆಗ್ರಹ

ಸುರಪುರ: ಸರಕಾರ ರಾಜ್ಯದಲ್ಲಿನ ಪಾಲಿಕೆ,ನಗರಸಭೆ,ಪುರಸಭೆ,ಪಟ್ಟಣ ಪಂಚಾಯಿತಿಗಳಲ್ಲಿ ಹೊರಗುತ್ತಿಗೆ ನೌಕರರಿಗೂ ಪೌರಕಾರ್ಮಿಕರ ಮಾದರಿಯಲ್ಲಿ ನೇರ ನೇಮಕಗೊಳಿಸಲು ಆಗ್ರಹಿಸಿ ಹೊರಗುತ್ತಿಗೆ ಪೌರ ಕಾರ್ಮಿಕರು ಶಾಸಕ ರಾಜುಗೌಡ ಅವರು ಗೃಹ ಕಚೇರಿ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿ ಶಾಸಕರಿಗೆ ಬರೆದ ಮನವಿಯನ್ನು ಶಾಸಕರ ಆಪ್ತ ಶಂಕರ ನಾಯಕರವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಗದೀಶ ಶಾಖನವರ ಮಾತನಾಡಿ, ಸರಕಾರದ ಮೇಲೆ ಹೊರ ಗುತ್ತಿಗೆ ನೌಕರರಿಗೆ ಆಗಿರುವ ತಾರತಮ್ಯ ಕುರಿತು ಸರಕಾರದ ಗಮನಸೆಳೆದು ಒತ್ತಡ ಹೇರಬೇಕು ಎಂದರು.

ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ಅಡಿ ಕೆಲಸ ಮಾಡುತ್ತಿದ್ದ 11,133 ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಿದ್ದು ಇದೇ ಮಾದರಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುವ ಕಸ ಸಾಗಿಸುವ ವಾಹನ ಚಾಲಕರು, ಒಳಚರಂಡಿ ಕಾರ್ಮಿಕರು, ವಾಟರಮನ್, ಡಾಟಾ ಆಪರೇಟರ್‍ಗಳನ್ನು ನೇರ ಪಾವತಿಗೆ ಒಳಪಡಿಸದೇ ಕೈಬಿಟ್ಟು ರಾಜ್ಯ ಸರಕಾರ ತಾರತಮ್ಯದ ಧೋರಣೆ ಅನುಸರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜುಲೈ ತಿಂಗಳಲ್ಲಿ ಮುಖ್ಯಮಂತ್ರಿಗಳು ಚರ್ಚೆಗೆ ಆಹ್ವಾನಿಸಿ ಮೂರು ತಿಂಗಳಲ್ಲಿ ಎಲ್ಲಾ ನೇರ ಪಾವತಿ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲಾಗುವುದು ಎಂದು ಲಿಖಿತವಾಗಿ ಭರವಸೆ ನೀಡಿದ್ದರು ಅಲ್ಲದೆ ಚರ್ಚಿಸಿ ತೀರ್ಮಾನಕ್ಕೆ ಬರಲು ಉನ್ನತ ಅಧಿಕಾರಿಗಳು ಹಾಗೂ ಪೌರ ಕಾರ್ಮಿಕ ಸಂಘಟನೆಗಳ ಮುಖಂಡರುಗಳ ಜಂಟಿ ಸಮಿತಿ ರಚಿಸಿ ತೀರ್ಮಾನಕ್ಕೆ ಬರುವ ಮುಂಚೆ ಸಚಿವ ಸಂಪುಟ ಸಭೆಯಲ್ಲಿ ಕೇವಲ 11ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ತೀರ್ಮಾನಿಸಿರುವುದು ಪೌರ ಕಾರ್ಮಿಕರಿಗೆ ಅನ್ಯಾಯವಾಗಿದೆ ರಾಜ್ಯದಲ್ಲಿ 33ಸಾವಿರ ಪೌರ ಕಾರ್ಮಿಕರು 20ವರ್ಷಗಳಿಂದ ಖಾಯಂ ಸಲುವಾಗಿ ಕಾಯುತ್ತಾ ಕುಳಿತಿದ್ದಾರೆ ಕೂಡಲೇ ಮುಖ್ಯಮಂತ್ರಿಗಳು ನೀಡಿರುವ ಭರವಸೆಯಂತೆ ಹೊರ ಗುತ್ತಿಗೆ ಕಾರ್ಮಿಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ಜೈರಾಮ ನಾಯಕ,ಶರಣು ನಾಯಕ ಬೈರಿಮಡ್ಡಿ,ಈಶ್ವರ ನಾಯಕ ಹಾಗೂ ಸಂಘದ ಗೌರವಾಧ್ಯಕ್ಷ ಮೌನೇಶ ಕಟ್ಟಿಮನಿ, ಪ್ರಧಾನ ಕಾರ್ಯದರ್ಶಿ ಶರಣಬಸವ ಮಲ್ಲಿಬಾವಿ ಸೇರಿದಂತೆ ಅನೇಕ ಹೊರ ಗುತ್ತಿಗೆ ಕಾರ್ಮಿಕರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago