ಸುರಪುರು: ವಿದ್ಯಾರ್ಥಿಗಳು ಸತತ ಅಧ್ಯಾಯನ ನಿರಂತರ ಪರಿಶ್ರಮ ಹಾಗೂ ಉತ್ತಮ ಚಿಂತನೆ ಗುರಿ, ಉದ್ದೇಶಗಳು ಹೊಂದಿದಾಗಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಪೂಜ್ಯ ಶ್ರೀ ನಿರಂಜನ ಮಾಹಾಸ್ವಾಮಿಗಳು ಹೇಳಿದರು.
ರಂಗಂಪೇಟೆಯ ಬಸವಪ್ರಭು ವಿದ್ಯಾವರ್ಧಕ ಸಂಸ್ಥೆ ಸಂಚಾಲಿತವಾಗಿ ನಡೆಯುತ್ತಿರುವ ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ತರಬೇತಿ ಶಿಭಿರ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪ್ರತಿನಿತ್ಯ ಗಡಿಯಾರದ ರೀತಿಯಲ್ಲಿ ಚಲನಶೀಲವಾಗಿರಬೇಕು, ದೇಶಕ್ಕೆ ಆದರ್ಶವಾದ ಮಹಾತ್ಮರ ಚರಿತ್ರೆ, ಇತಿಹಾಸ, ಹೋರಾಟಗಳ ಅಧ್ಯಾಯನ ಮಾಡಬೇಕು, ಪುಸ್ತಕದ ಜೊತೆಗೆ ಪಠ್ಠೆತರ ಪುಸ್ತಕಗಳನ್ನು ಹಾಗೂ ಸಾಂಸ್ಕೃತಿಕ ಅಧ್ಯಾಯನವನ್ನು ಹೊಂದಬೇಕು ಎಂದು ಹೇಳಿದ ಅವರು ವೇಳಾಪಟ್ಟಿಯಂತೆ ವಿದ್ಯಾರ್ಥಿಗಳು ಶ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನೆಳ್ಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿವಶರಣಪ್ಪ ಹೆಡಿಗಿನಾಳ, ಬಲಭೀಮ ಪಾಟೀಲ್, ರುದ್ರಪ್ಪ ಕೆಂಭಾವಿ ವೇದಿಕೆಮೇಲಿದ್ದರು, ಕಾಲೇಜಿನ ಪ್ರಾಚಾರ್ಯ ವಿರೇಶ ಹಳೀಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಕಾರ್ಯಕ್ರಮವನ್ನು ಪ್ರವೀಣ ಜಕಾತಿ ನಿರೂಪಿಸಿ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…