ಬಿಸಿ ಬಿಸಿ ಸುದ್ದಿ

ಪೋಷಣಾ ಅಭಿಯಾನ ಕಾರ್ಯಕ್ರಮ

ಸುರಪುರ: ಸದೃಢ ದೇಶಕ್ಕೆ ಭದ್ರ ಭೂನಾದಿ ಹಾಕುವಲ್ಲಿ ತಾಯಿ ಪ್ರಾತ್ರ ಪ್ರಮುಖವಾಗಿದೆ ಎಂದು ಹಸನಾಪುರ ವಲಯ ಮೇಲ್ವಿಚಾರಕಿ ಜಯಶ್ರೀ ಬಿರಾದರ್ ಹೇಳಿದರು.

ತಾಲೂಕ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಶಿಶು ಅಭಿವೃದ್ಧಿ ಯೋಜನೆ ಸುರಪುರ ಸಯೋಗದಲ್ಲಿ ಅರಕೇರಾ ಕೆ ಅಂಗನವಾಡಿ ಕೇಂದ್ರ ಚೌಡಮ್ಮ ದೇವಾಲಯದ ಆವರಣದಲ್ಲಿ ಬುಧುವಾರ ಆಯೋಜಿಸಿದ ಪಂಚಾಯತ್ ಮಟ್ಟದ ಪೆÇೀಷಣಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಅಲ್ಲಿ ಗರ್ಭಿಣಿಯರು ತೆಗೆದುಕೊಳ್ಳಬಹುದಾದ ಎಚ್ಚರಿಕೆ ಕ್ರಮ ಹಾಗೂ ಮಕ್ಕಳ ಪಾಲನೆ-ಲಾಲನೆ ಮಾಡುವಲ್ಲಿ ಜಾಗೃತೆ ಮೂಡಿಸುವುದು ಅತ್ಯಂತ ಮುಖ್ಯ ಕರ್ತವ್ಯವಾಗಿದೆ. ಗರ್ಭಿಣಿಯರ ಆರೋಗ್ಯ ಮತ್ತು ಮಗುವಿನ ಆರೋಗ್ಯದ ಕಡೆಗೆ ಗಮನಕೊಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಸುನಿತಾ ತೇಲ್ಕರ್, ಮುನಿರಾಬೇಗಂ, ಜಯಶ್ರೀ, ನಾಗರತ್ನ, ಮಂಜುಶ್ರೀ, ಈಶ್ವರಮ್ಮ, ಸಾಬಮ್ಮ, ರಾಧಾಬಾಯಿ, ಗ್ರಾಮದ ಮುಖಂಡರು ಇತರರು ಇದ್ದರು

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

17 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

17 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago