ಬಿಸಿ ಬಿಸಿ ಸುದ್ದಿ

ತನಿಖಾ ಸಂಸ್ಥೆಗಳ ರಾಜಕೀಯ ಪ್ರೇರಿತ ದಾಳಿ: ವೆಲ್ಫೇರ್ ಪಾರ್ಟಿ ಖಂಡನೆ

ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರಕಾರ ಮತ್ತು ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಅಲ್ಪಸಂಖ್ಯಾತ ,ಹಿಂದುಳಿದ , ರೈತ ಮತ್ತು ಸರ್ಕಾರವನ್ನು ಪ್ರಶ್ನಿಸುವ ಸಂವಿಧಾನ ಪರ ಹೋರಾಡುವವರ ಮೇಲೆ ನಿರಂತರವಾಗಿ ಕಿರುಕುಳ ಹೆಚ್ಚಾಗಿದ್ದು,ಕೇಂದ್ರ ಸರ್ಕಾರ NIA, ED ಸಂಸ್ಥೆಗಳನ್ನು ದುರ್ಬಳಕೆ ಮಾಡಿ ಅಲ್ಪಸಂಖ್ಯಾತರನ್ನು ಬೆದರಿಸುವ ಕೆಲಸ ಮಾಡುತ್ತಿದ್ದು ಇದು ಅತ್ಯಂತ ಖಂಡನಿಯ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಬಿನ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದರು.

ಮದ್ರಸಗಳ ಸರ್ವೇ ಹೆಸರಲ್ಲಿ ಅಲ್ಪಸಂಖ್ಯಾತ ವಿದ್ಯಾಸಂಸ್ಥೆ ಗಳಲ್ಲಿ ಕಿರುಕುಳ ಕೊಟ್ಟು ಭಯದ ವಾತಾವರಣ ಸೃಷ್ಟಿಸಿ ಮಾಡುವ ಹುನ್ನಾರ ನಡೆದಿದೆ ಜೊತೆಗೆ ಸಾಮಾಜಿಕ ಹಾಗೂ ಧಾರ್ಮಿಕ ಸಂಘಟನೆಗಳನ್ನು ದಮನ ಮಾಡುವ ನಿರಂತರ ಕಾರ್ಯ ನಡೆದಿದೆ ಎಂದು ಅವರು ಹೇಳಿದರು.

ನಮ್ಮ ರಾಜ್ಯದಲ್ಲಿ ಸ್ವತಹ ಮುಖ್ಯಮಂತ್ರಿಗಳು ಎರಡು ಸಮುದಾಯದ ಮಧ್ಯ ತಾರತಮ್ಯ ಮಾಡಿರುವುದು ಜಗಜಾಹಿರಾಗಿದೆ,ಒಂದು ಸಮುದಾಯದ ಯುವಕನ ಕೊಲೆ ಆದಾಗ ಸ್ವತಹ ಮುಖ್ಯಮಂತ್ರಿ ಯುವಕ ಮನೆಗೆ ಭೇಟಿ ನೀಡಿದರು ಪರಿಹಾರ ಘೋಷಣೆ ಮಾಡಿ ಪ್ರಕರಣವನ್ನು NIA ಗೆ ವಹಿಸಿದ್ದು ಅದೇ ಊರಿನ ಅಲ್ಪಸಂಖ್ಯಾತ ಸಮುದಾಯದ ಯುವಕನ ಕೊಲೆಯ ಬಗ್ಗೆ ಒಂದು ಹೇಳಿಕೆಯು ನೀಡಿಲ್ಲ, ಒಂದು ನಯಪೈಸೆ ಪರಿಹಾರ ಘೋಷಿಸಿಲ್ಲ ಬದಲಿಗೆ ಪ್ರಚೋದನಕಾರಿ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಹುಟ್ಟಿಸಿದವರ ಮೇಲೆ ಇದ್ದ ಪ್ರಕರಣಗಳು ಹಿಂಪಡೆದು ಪರೋಕ್ಷವಾಗಿ ಕೋಮುವಾದಿ ಗಳಿಗೆ, ಕಿಡಿಗೇಡಿಗಳಿಗೆ ಬೆಂಬಲ ನೀಡಿದ್ದಾರೆ.ಇಂದು ನಡೆದಿರುವ ಐಟಿ ಹಾಗೂ ಇಡಿ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಅಲ್ಫಾಸಂಖ್ಯಾತ ಸಮುದಾಯದ ರಾಜಕೀಯ ದಮನದ ಹುನ್ನಾರ ಇದು ಆಗಿದೆ ಎಂದು ಅವರು ಹೇಳಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago