ಬಿಸಿ ಬಿಸಿ ಸುದ್ದಿ

ಹಣಮಂತರಾಯ ಅಟ್ಟೂರಗೆ “ವಿಶ್ವ ಪ್ರಜಾಸೇವಾ ರತ್ನ” ರಾಷ್ಟ್ರ ಪ್ರಶಸ್ತಿ ಪ್ರದಾನ

ಧಾರವಾಡ: ನಗರದ ರಂಗಾಯಣ ಸಭಾಭವನದಲ್ಲಿ ವಿಶ್ವದರ್ಶನ ಕನ್ನಡ ದಿನಪತ್ರಿಕೆಯ ಸಮ್ಮೇಳನದಲ್ಲಿ ಕಲಬುರಗಿಯ ಜನಪರ ಹೋರಾಟಗಾರ ನ್ಯಾಯವಾದಿ ಹಣಮಂತರಾಯ ಎಸ್ ಅಟ್ಟೂರ ಅವರ ಸಮಾಜ ಸೇವೆಯನ್ನು ಗುರುತಿಸಿ “ವಿಶ್ವ ಪ್ರಜಾಸೇವಾ ರತ್ನ” ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಅರಳಿ ನಾಗರಾಜ  ಸಮಾರಂಭ ಉದ್ಘಾಟಿಸಿ ಮಾತನಾಡುತ್ತಾ  ಸಮಾಜ ಸೇವಕರು ಸಮಾಜದ ಆಸ್ತಿ, ಅಂಥವರನ್ನು ಗುರುತಿಸಿ ಸರಕಾರ ಅಲ್ಲದೆ ಇತರ ಸಂಘ, ಸಂಸ್ಥೆಗಳು ಗೌರವಿಸುವುದು ಹಾಗೂ ಪ್ರಶಸ್ತಿ ನೀಡುವುದರೊಂದಿಗೆ ಸಮಾಜ ಸೇವಕರ  ಕಾರ್ಯ ಇಮ್ಮಡಿಗೊಳಿಸಿದಂತಾಗುತ್ತದೆ.ಇಂಥಹ ಗುರುತರವಾದ ಜವಾಬ್ದಾರಿಯನ್ನು ಅರಿತು ಮಾಡಿದರೆ ಉತ್ತಮವಾದ ಸಮಾಜ ಕಟ್ಟಲು ನಾಂದಿಯಾಗುತ್ತದೆ.  ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಯಿಂದ ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಮಾರ್ಮಿಕವಾಗಿ ನುಡಿದರು.

ವೇದಿಕೆಯ ಮೇಲೆ ಗದಗ ಜಿಲ್ಲೆಯ ಗಜೇಂದ್ರಗಡದ ಶರಣಬಸವ ಸಂಸ್ಥಾನ ಕೋಡಿಮಠದ ಡಾ. ಕಾಲಜ್ಞಾನ ಬ್ರಹ್ಮ ಸದ್ಗುರು ಮಹಾಶಿವಯೋಗಿಗಳು ಸೇರಿದಂತೆ ನಾಡಿನ ಅನೇಕ ಜನ ಪೂಜ್ಯರು ಉಪಸ್ಥಿತರಿದ್ದರು.

ಬೆಳಗಾವಿಯ ಹಿರಿಯ ಪತ್ರಕರ್ತರಾದ ಎಲ್ ಎಸ್ ಶಾಸ್ತ್ರಿಗಳು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದ ಆಯೋಜಕರಾದ ಎಸ್ ಎಸ್ ಪಾಟೀಲ ಸೇರಿದಂತೆ ಅನೇಕ ಜನ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಂಗಭೂಮಿ ಕಲಾವಿದರಾದ ರಮೇಶ ಕೋರಿಶೆಟ್ಟಿ ಹಾಗೂ ಸಿದ್ದರಾಮಪ್ಪ ಸರಸಂಬಿ,ರಾಜ್ಯ ಪ್ರಶಸ್ತಿ ಹಾಗೂ ರಾಷ್ಟ್ರ ಪ್ರಶಸ್ತಿ ಮುರಿಗೆಪ್ಪ ಹಡಪದ ಸೇಡಂ ಅವರಿಗೆ ನೀಡಲಾಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ ಅನೇಕ ಜನರಿಗೆ  ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

emedialine

Recent Posts

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

18 seconds ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

40 mins ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

2 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

3 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

5 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

5 hours ago