ಕಲಬುರಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಇವರಿಗೆ ಸರ್ಕಾರವು ಉಪನಿರ್ದೇಶಕ ಹುದ್ದೆಗೆ ಬಡ್ತಿ ನೀಡಿ ಕೇಂದ್ರ ಕಚೇರಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಗುರುವಾರ ಇಲ್ಲಿನ ವಾರ್ತಾ ಭವನದಲ್ಲಿ ಸಿಬ್ಬಂದಿಗಳಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಸಿಬ್ಬಂದಿಗಳಾದ ಡಿ.ಕೆ.ರಾಜರತ್ನ, ರವಿ ಮಿರಸ್ಕರ್, ಉಮಾಶಂಕರ ಚಿನಮಳ್ಳಿ, ಸೈಯದ್ ಇಸ್ಮಾಯಿಲ್ ಪಾಶಾ, ನರಸಿಂಹ, ಅಶೋಕ, ಅಪ್ರೆಂಟಿಸ್ ಅಭ್ಯರ್ಥಿಗಳಾದ ನಿರ್ಮಲಾ, ಉಮಾಶ್ರೀ ಅವರು ಸಿದ್ದೇಶ್ವರಪ್ಪ ಜಿ.ಬಿ. ಅವರಿಗೆ ಫಲತಾಂಬುಲ ಜೊತೆಗೆ ನೆನಪಿನ ಕಾಣಿಕೆ ನೀಡಿ ಬೀಳ್ಕೊಟ್ಟರು.
ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿ ಸಿಂಗ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ ಮತ್ತು ರಾಜ್ಯ ಪರಿಷತ್ ಸದಸ್ಯ ಶಿವರಂಜನ ಸತ್ಯಂಪೇಟ್ ಅವರ ನೇತೃತ್ವದಲ್ಲಿ ದೇವೆಂದ್ರಪ್ಪ ಅವಂಟಿ, ಬಾಬುರಾವ ಕೋಬಾಳ, ಭೀಮಾಶಂಕರ ಫಿರೋಜಾಬಾದ ಅವರನ್ನೊಳಗೊಂಡ ಪದಾಧಿಕಾರಿಗಳು ವರ್ಗಗೊಂಡ ಸಿದ್ದೇಶ್ವರಪ್ಪ ಜಿ.ಬಿ. ಅವರಿಗೆ ಸ್ಮರಣಿಕೆ ನೀಡಿ ಪ್ರೀತಿಯಿಂದ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ದೇವೆಂದ್ರಪ್ಪ ಕಪನೂರ, ಕರ್ನಾಟಕ ರಾಜ್ಯ ಪತ್ರಿಕಾ ಮಾನ್ಯತಾ ಸಮಿತಿ ಸದಸ್ಯ ಹಣಮಂತರಾವ ಭೈರಾಮಡಗಿ, ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕ ದೇವಯ್ಯ ಗುತ್ತೇದಾರ, ದಿ.ಹಿಂದೂ ಪತ್ರಿಕೆಯ ಪ್ರಧಾನ ವರದಿಗಾರ ಕುಮಾರ ಬುರುಡಿಕಟ್ಟಿ, ನೃಪತುಂಗ ಪತ್ರಿಕೆಯ ಸಂಪಾದಕ ಶಿವರಾಯ ದೊಡ್ಮನಿ ಸೇರಿದಂತೆ ಅನೇಕ ಹಿರಿಯ, ಕಿರಿಯ ಪತ್ರಕರ್ತರು, ಸಂಪಾದಕರು ಇದ್ದರು.
ರವಿ ಮಿರಸ್ಕರ್ ಸ್ವಾಗತಿಸಿ ವಂದಿಸಿದರು. ಸಿದ್ದಣ್ಣ ಮಾಲಗಾರ ನಿರೂಪಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…