ಬಿಸಿ ಬಿಸಿ ಸುದ್ದಿ

ಶಿಕ್ಷಕರು ಸಮಾಜದ ನಿರ್ಮಾಪಕರು: ಶಾಂತಪ್ಪ ಸೂರನ

ಕಲಬುರಗಿ: ನಗರದ ಕೆಪಿಇ ಶಿಕ್ಷಣ ಸಂಸ್ಥೆಯ ಡಾ. ಅಂಬೇಡ್ಕರ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯ ಕಲಬುರಗಿಯಲ್ಲಿ ಕರ್ನಾಟಕ ಪೀಪಲ್ಸ್ ಏಜ್ಯುಕೇಷನ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಂತಪ್ಪ ಸೂರನ  ಮಾತನಾಡಿದರು.

ಶಿಕ್ಷಕರು ಸಮಾಜದಲ್ಲಿ ಅತ್ಯಂತ ಜವಾಬ್ದಾರಿಯುತವಾದ ಸ್ಥಾನ ಹೊಂದಿದ್ದಾರೆ. ಶಿಕ್ಷಕರ ಹುದ್ದೆ ಪವಿತ್ರವಾದದ್ದು, ಸಮಾಜವನ್ನು ತಿದ್ದುವ ಹಾಗೂ ಸನ್ಮಾರ್ಗದತ್ತ ತೆಗೆದುಕೊಂಡು ಹೊಗುವ ಒಳ್ಳೆಯ ಶಿಕ್ಷಕರಾಗಿ ಗುರುತಿಸಿ ಕೊಳ್ಳಬೇಕು. ನಮ್ಮ ಸಂಸ್ಥೆಯ ಪ್ರವೇಶ ಪಡೆದಿರುವ ಮಕ್ಕಳು ತಳ ಸಮೂದಾಯಕ್ಕೆ ಸೇರಿರುತ್ತಾರೆ. ಅಂತಹವರಿಗೆ ಒಳ್ಳೆಯ ಶಿಕ್ಷಣವನ್ನು ಕೊಟ್ಟು ಉನ್ನತ ವ್ಯಕ್ತಿಗಳನ್ನಾಗಿ ಮಾಡುವ ಜವಾಬ್ದಾರಿ ತಮ್ಮ ಮೇಲಿದೆ ಎಂದರು.

ಕೆಪಿಇ ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಡಾ. ಚಂದ್ರಶೇಖರ ಶೀಲವಂತ ರವರು ಸ್ವಾಗತ ಮತ್ತು ಪ್ರಾಸ್ಥಾವಿಕವಾಗಿ ಮಾತನಾಡುತ್ತ ಶಿಕ್ಷಕರು ನಿರಂತರ ಅಧ್ಯಯನ ಮತ್ತು ಅಧ್ಯಪನದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳಿಗೆ ಒಳ್ಳೆಯ ಜ್ಞಾನ ನೀಡುವುದರ ಮೂಲಕ ಬಲಿಷ್ಠ ಭಾರತವನ್ನು ಕಟ್ಟುವ ನಾಗರಿಕರಾಗಿ ಹೊರಹೊಮ್ಮಲು ಸಾದ್ಯವಾಗುತ್ತದೆ ಎಂದರು. ಒಂದು ಒಳ್ಳೆಯ ಗುರುವಿದ್ದರೆ ಶಿಷ್ಯ ಎಂತಹ ಗುರಿಯನ್ನು ಮುಟ್ಟಲು ಸಾದ್ಯವಾಗುತ್ತದೆ ಸಾಧನೆ ಎನ್ನುವುದು ಸಾಧಕನ ಸೊತ್ತು ಸೊಮಾರಿಯದಲ್ಲ ಅಂತಹ ಸಾಧಕರನ್ನು ನಿರ್ಮಾಣ ಮಾಡುವಲ್ಲಿ ನಮ್ಮ ಶಿಕ್ಷಕರು ತೊಡಗಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮ ಘನ ಅಧ್ಯಕ್ಷತೆಯನ್ನು ಕೆಪಿಇ ಸಂಸ್ಥೆಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ರಾಧಾಕೃಷ್ಣಜೀ ರವರು ಈ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕರನ್ನು ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಕೆಪಿಇ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಡಾ. ಮಾರುತಿರಾವ ಡಿ. ಮಾಲೆಯವರು ಮತ್ತು ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಚಂದ್ರಶೇಖರ ಮಾತನಾಡಿದರು. ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಸ್ವೀಕರಿಸಿ ಡಾ. ಅನೀಲಕುಮಾರ ರಾಜನಾಳೆ, ಡಾ. ಮಹಾದೇವ, ಶ್ರೀ ಮಧುಕರ ಡಾಂಗೆ ಡಾ. ಅಂಬೇಡ್ಕರ ಬಿ.ಇಡ್ ಕಾಲೇಜಿನ ಬೆಂಗಳೂರಿನ ಪ್ರಾಚಾರ್ಯರಾದ ಡಾ. ಅಮತುಲ್ ಹಸೀಬ್ ವಾಜಿಹಾ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.

ಕೆಪಿಇ ಸಂಸ್ಥೆಯ ಎಲ್ಲಾ ಶಾಲಾ ಕಾಲೇಜಿನ ಮುಖ್ಯಸ್ಥರು, ಶಿಕ್ಷಕರು, ಶಿಕ್ಷಕೇತರರು ಭಾಗವಹಿಸಿದರು. ಈ ಕಾರ್ಯಕ್ರಮವನ್ನು ಡಾ. ಗಾಂಧೀಜಿ ಮೋಳಕೇರೆ ನಿರೂಪಿಸಿದರು. ಡಾ. ಅಂಬೇಡ್ಕರ ಮಹಾವಿದ್ಯಾಲಯದ ಪ್ರಾಚಾರ್ಯಾರಾದ ಪ್ರೊ. ವಿಜಯಕುಮಾರ ವಂದಿಸಿದರು

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

18 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago