BMS ಅಕ್ರಮ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

0
18
  • ಮಾಜಿ ಶಾಸಕ ಹೆಚ್.ಎಂ.ರಮೇಶ್‌ ಗೌಡ ನೇತೃತ್ವದಲ್ಲಿ ಸರ್ವಜ್ಞನಗರದಲ್ಲಿ ಪಾದಯಾತ್ರೆ

ಬೆಂಗಳೂರು: ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ನಲ್ಲಿ ದಾನಿ ಟ್ರಸ್ಟಿ ಮತ್ತು ಅಜೀವ ಟ್ರಸ್ಟಿಗಳ ನೇಮಕದಲ್ಲಿ ಅಕ್ರಮ ಹಾಗೂ ಇಡೀ ಟ್ರಸ್ಟಿನ ಆಸ್ತಿಯನ್ನು ಖಾಸಗಿ ವ್ಯಕ್ತಿಗಳು ಲಪಟಾಯಿಸಲು ಶಾಮೀಲು ಆರೋಪಕ್ಕೆ ಗುರಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಬೆಂಗಳೂರಿನ ಸರ್ವಜ್ಞನಗರ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಜಾಥಾ ನಡೆಸಿ ಪ್ರತಿಭಟನೆ ನಡೆಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ರಮೇಶ್ ಗೌಡ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಕಾರ್ಯಕರ್ತರು ಸಚಿವರ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡರು; “ಸಚಿವ ಸ್ಥಾನಕ್ಕೆ ಅಶ್ವತ್ಥನಾರಾಯಣ ಅವರು ಕೂಡಲೇ ರಾಜೀನಾಮೆ ನೀಡಬೇಕು, ಇಡೀ ಬಿಎಂಸ್ ಟ್ರಸ್ಟ್ ಅನ್ನು ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಅಕ್ರಮದ ಬಗ್ಗೆ ಉನ್ನತ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

ವಿಧಾನಸಭೆ ಕಲಾಪದಲ್ಲಿಯೇ ನಮ್ಮ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತ ಹಗರಣವನ್ನು ಬಯಲು ಮಾಡಿದ್ದಾರೆ. ಆದರೆ, ತನಿಖೆ ನಡೆಸುವುದಿಲ್ಲ ಎಂದು ಹೇಳಿ ಬಿಜೆಪಿ ಸರಕಾರ ಭಂಡತನ ಪ್ರದರ್ಶಿಸುತ್ತಿದೆ ಎಂದು ಅವರು ಆರೋಪ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here