ಬಿಸಿ ಬಿಸಿ ಸುದ್ದಿ

ಪತ್ರಿಕೆ ತಲುಪಿಸುವಲ್ಲಿ ಪತ್ರಿಕಾ ವಿತರಕರ ಪಾತ್ರ ಬಹುಮುಖ್ಯ: ರಘುವೀರಸಿಂಗ ಠಾಕೂರ

ಶಹಾಬಾದ: ಒಬ್ಬ ವರದಿಗಾರ ಸುದ್ದಿಯನ್ನು ಬರೆಯಬಹುದು, ಪತ್ರಿಕೆಯಲ್ಲಿ ಅದನ್ನು ಪ್ರಕಟಿಸಬಹುದು. ಆದರೆ ಅದನ್ನು ಜನರಿಗೆ ತಲುಪಿಸುವ ಕಾರ್ಯ ಪ್ರಮುಖವಾದದ್ದು, ಅದನ್ನು ಮಾಡುವವರು ಇಲ್ಲದಿದ್ದರೆ ಇಡೀ ದಿನ ಮಾಡಿದ ಕೆಲಸ ವ್ಯರ್ಥವಾಗುತ್ತದೆ ಎಂದು ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕಾಧ್ಯಕ್ಷ ರಘುವೀರಸಿಂಗ ಠಾಕೂರ ಹೇಳಿದರು.

ಅವರು ಶನಿವಾರ ಸಮೀಪದ ನಿಜಾಮಬಜಾರನಲ್ಲಿರುವ ಬೆಂಕಿತಾತತನವರ ಮಠದಲ್ಲಿ ಶಹಾಬಾದ ಗೆಳೆಯರ ಬಳಗದ ವತಿಯಿಂದ ಪತ್ರಿಕಾ ವಿತರಕರಿಗೆ ಮತ್ತು ನೂತನ ಪತ್ರಕರ್ತರಿಗೆ ಹಾಗೂ ನೂತನವಾಗಿ ನೇಮಕಗೊಂಡ ಕಸಾಪ ಜಿಲ್ಲಾ ಸಹಕಾರ್ಯದರ್ಶಿಗೆ ಆಯೋಜಿಸಲಾದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಜನಸಾಮಾನ್ಯರಿಗೆ ಬೆಳಗ್ಗೆ ಏಳುತ್ತಲೇ ಪತ್ರಿಕೆ ಓದುವ ಹವ್ಯಾಸ ಇರುವುದು ಸಹಜ. ಅದನ್ನು ತಲುಪಿಸುವಲ್ಲಿ ಪತ್ರಿಕಾ ವಿತರಕರ ಪಾತ್ರ ಬಹುಮುಖ್ಯವಾಗಿದೆ. ಬೇಸಿಗೆ, ಚಳಿ, ಮಳೆ ಎನ್ನದೆ ಪ್ರತಿನಿತ್ಯ ಬೆಳಗ್ಗೆ ಪತ್ರಿಕೆಗಳನ್ನು ಮನೆಮನೆಗೆ ತಲುಪಿಸವ ಕಾರ್ಯ ಮಾಡುತ್ತಾರೆ. ಜಗತ್ತು ಎμÉ್ಟೀ ಆಧುನಿಕತೆಯಲ್ಲಿ ಬೆಳೆದರೂ ಪತ್ರಿಕೆಗಳನ್ನು ಓದುವುದನ್ನು ಮಾತ್ರ ಯಾರೂ ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಪತ್ರಿಕಾ ವಿತರಕರನ್ನು ಸಮಾಜದಲ್ಲಿ ಗೌರವದಿಂದ ಕಾಣಬೇಕು. ಯಾವುದೇ ಕ್ಷೇತ್ರದಲ್ಲಾದರೂ ತಮ್ಮ ಕೆಲಸಕ್ಕೆ ತಕ್ಕಂತೆ ಗೌರವ ಇರುತ್ತದೆ. ಅದೇ ರೀತಿ ಪತ್ರಿಕಾ ವಿತರಕರನ್ನೂ ಕೂಡ ಗೌರವಿಸುವಂತಾಗಬೇಕು ಎಂದು ತಿಳಿಸಿದರು.

ಕಸಾಪ ಗೌರವ ಕಾರ್ಯದರ್ಶಿ ಬಸವರಾಜ ಮದ್ರಿಕಿ ಮಾತನಾಡಿ, ನೂತನ ಪತ್ರಕರ್ತರು ಹಿರಿಯರ ಮಾರ್ಗದರ್ಶನ ಪಡೆಯುವುದು ಅವಶ್ಯಕತೆಯಿದೆ.ಇತ್ತೀಚೆಗೆ ಮಾಧ್ಯಮಗಳು ಬದಲಾಗುತ್ತಿವೆ.ಬದಲಾವಣೆ ಜಗದ ನಿಯಮ.ಅದರ ಜತೆ ಸತ್ಯ ಹಾಗೂ ನೈಜ ಸುದ್ದಿಗಳಿಗೆ ಮಾನ್ಯತೆ ಕೊಡಬೇಕೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕರಾದ ಶರಣಬಸಪ್ಪ ಕಡಗಂಚಿ, ವೀರಪ್ಪ ನಾಲವಾರ,ಪವನ ಗೊಬ್ಬೂರಕರ್ ಮತ್ತು ನೂತನ ಪತ್ರಕರ್ತರಾದ ಮಹ್ಮದ್ ಮುಸ್ತಾಕ, ಮಹ್ಮದ್ ರಫಿಕ್,ಜಾಕೀರ ಹುಸೇನ್ ಮಿರ್ದೆ ಹಾಗೂ ಕಸಾಪ ಜಿಲ್ಲಾ ಸಹಕಾರ್ಯದರ್ಶಿ ನಾಗಣ್ಣ ರಾಂಪೂರೆ ಅವರಿಗೆ ಸನ್ಮಾನಿಸಲಾಯಿತು.

ವಿಜಯಕುಮಾರ ಮಾಣಿಕ, ರೇವಣಸಿದ್ದಪ್ಪ ಮಾಣಿಕ್, ಶಾಂತು ಮಾಣಿಕ್,ಶರಣು ವಸ್ತ್ರದ್,ಬಸವರಾಜ ಮದ್ರಿಕಿ, ಲೋಹಿತ್ ಕಟ್ಟಿ, ದಶರಥ ಕೋಟನೂರ್, ರಾಜು ಕೋಬಾಳ,ಆನಂದ ಘಂಟಿಮಠ, ಸದಾನಂದ ಕುಂಬಾರ, ಕಾಶಪ್ಪ ಚನ್ನೂರ್, ಮಹ್ಮದ್ ಫಯಾಜ್, ಭೀಮಯ್ಯ ಗುತ್ತೆದಾರ, ರಾಜೇಶ ಯನಗುಂಟಿ, ನಾಗರಾಜ ದಂಡಾವತಿ, ಶಿವಕುಮಾರ ಕುಸಾಳೆ,ಮರಲಿಂಗ ಗಂಗಭೋ,ರವಿ ಸಣತಮ,ಡಾ.ಸಂಜಯ್ ಜಿಂಗಾಡೆ, ಡಾ.ವೆಂಕಟೇಶ ನಾಯಿಕೊಡಿ, ಫಜಲ್ ಪಟೇಲ್,ಮಹ್ಮದ್ ದಾವೂದ್,ಚಂದನ ಬುರ್‍ಬುರೆ, ಯುಸೂಫ್ ಚೌದ್ರಿ, ನಿಂಗಪ್ಪ ಗೋಳಾ,ಶಿವಕುಮಾರ ನಾಯ್ಕಲ್ ಇತರರು ಇದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

9 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

9 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

12 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

12 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

12 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

12 hours ago