ಕಲಬುರಗಿ: ಹೈದರಾಬಾದ್ ಕರ್ನಾಟಕ ಭಾಗದ ಬೀದರ್ ಮೂಲದ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿಯನ್ನು ಕಾರ್ಯಸ್ಥಾನ ಮಾಡಿಕೊಂಡು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಬೆಳೆದವರು. ಅವರು ನಡೆದು ಬಂದ ದಾರಿ ಬಾಬಾಸಾಹೇಬರೆಡೆಗೆ ನಡೆದಿರುವುದನ್ನು ಗುರುತಿಸಬಹುದಾಗಿದೆ ಎಂದು ಕುವೆಂಪು ವಿವಿ ಕನ್ನಡ ಪ್ರಾ ದ್ಯಾಪಕ ಡಾ. ಶಿವಾನಂದ ಕೆಳಗಿನಮನಿ ಅಭಿಪ್ರಾಯಪಟ್ಟರು.
ಬೆಂಗಳೂರಿನ ಸಿ.ವಿ.ಜಿ. ಬುಕ್ಸ್, ಕಲಬುರಗಿಯ ದಲಿತ ಸಾಹಿತ್ಯ ಪರಿಷತ್ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಪ್ರೊ. ಎಚ್.ಟಿ. ಪೋತೆ ರಚಿಸಿದ ಬಾಬಾಸಾಹೇಬರೆಡೆಗೆ (ಖರ್ಗೆಜೀ ಜೀವನ ಕಥನ) ಕೃತಿ ಬಿಡುಗಡೆ ಹಾಗೂ ವಿವಿಧ ಅಕಾಡೆಮಿಗಳ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭದಲ್ಲಿ ಕೃತಿ ಕುರಿತು ಮಾತನಾಡಿದರು.
40ರ ದಶಕದಲ್ಲಿ ದಕ್ಷಿಣ ಭಾರತ, ಕರ್ನಾಟಕ ಅದರಲ್ಲೂ ವಿಶೇಷವಾಗಿ ಹೈ.ಕ. ಭಾಗದ ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಕ್ಷೇತ್ರದ ವಿವಿಧ ಮಜಲುಗಳನ್ನು ಈ ಕೃತಿ ಪರಿಚಯಿಸುತ್ತದೆ ಎಂದು ಹೇಳಿದರು. ಖರ್ಗೆಯವರು ತಮ್ಮ ಬದುಕಿನಲ್ಲಿ ದಾಟಿ ಬಂದ ಕಲ್ಲು ಮುಳ್ಳಿನ ಹಾದಿಯನ್ನು ಪರಿಚಯಿಸುವುದರ ಜೊತೆಗೆ ಡಾ. ಬಿ.ಆರ್. ಅಂಬೇಡ್ಕರ್, ಪೆರಿಯಾರ್, ನಾರಾಯಣ ಗುರು, ಫುಲೆ, ಬಿ.ಶಾಮಸುಂದರ ಮುಂತಾದವರ ಬದುಕು, ಸಾಧನೆಯನ್ನು ಈ ಕೃತಿ ಅನಾವರಣಗೊಳಿಸುತ್ತದೆ ಎಂದು ತಿಳಿಸಿದರು.
ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅಧ್ಯಕ್ಷತೆ ವಹಿಸಿದ್ದರು. ಇದೇವೇಳೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ. ಬಸವರಾಜ ಸಬರದ, ಪ್ರೊ. ಎಚ್.ಟಿ. ಪೋತೆ, ಕರ್ನಾಟಕ ನಾಟಕ ಪ್ರಶಸ್ತಿ ಪುರಸ್ಕೃತ ಪ್ರಭಾಕರ ಜೋಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಅಸುಂಡಿ ಅವರನ್ನು ಸನ್ಮಾನಿಸಲಾಯಿತು.
ಪ್ರಶಸ್ತಿ ಪುರಸ್ಕೃತರ ಪರವಾಗಿ ಡಾ. ಬಸವರಾಜ ಸಬರದ ಮಾತನಾಡಿ, ಹೈ.ಕ. ಭಾಗ ಸಾಹಿತ್ಯಕವಾಗಿ, ಸಾಂಸ್ಕೃತಿಕವಾಗಿ ತುಂಬಾ ಶ್ರೀಮಂತವಾಗಿದ್ದು, ಬೆಳಕಿಗೆ ಬರುತ್ತಿಲ್ಲ ಎಂದರು. ಡಾ. ಶ್ರೀಶೈಲ ನಾಗರಾಳ, ಪ್ರೊ. ಎಸ್.ಎಲ್. ಪಾಟೀಲ, ಪಿ.ಎಂ.ಮಣ್ಣೂರ, ಮಹಿಪಾಲರೆಡ್ಡಿ ಮುನ್ನೂರ್, ಬಿ.ಎಚ್. ನಿರಗುಡಿ, ಸುರೇಶ ಬಡಿಗೇರ, ಪ್ರೊ. ಸಂಗಣ್ಣ ಹೊಸಮನಿ ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…