ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಬಹಿಷ್ಕರಿಸುವುದಾಗಿ ಮುಖಂಡರ ಘೋಷಣೆ

0
19

ಸುರಪುರ: ಇದೇ ಅಕ್ಟೋಬರ್ 9 ರಂದು ಆಚರಿಸಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ತಾಲೂಕು ಆಡಳಿತದಿಂದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಸ್ವಾಭಿಮಾನಿ ಎಸ್.ಸಿ-ಎಸ್.ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ಮುಖಂಡರು ಭಾಗವಹಿಸಿದ್ದರು.ಸಭೆ ಆರಂಭಗೊಳ್ಳುತ್ತಿದ್ದಂತೆ ಅನೇಕ ಮುಖಂಡರು ನಾವೆಲ್ಲರು ಈ ಸಭೆಯನ್ನು ಬಹಿಷ್ಕರಿಸುತ್ತೇವೆ ಎಂದು ಘೋಷಿಸಿದರು.

Contact Your\'s Advertisement; 9902492681

ಅಲ್ಲದೆ ಈಗಾಗಲೇ ರಾಜ್ಯದಲ್ಲಿನ ಎಸ್.ಸಿ,ಎಸ್.ಟಿ ಸಮುದಾಯದ ಮೀಸಲು ಪ್ರಮಾಣ ಹೆಚ್ಚಿಸಲು ಆಗ್ರಹಿಸಿ ನಮ್ಮ ಸಮುದಾಯದ ಪೂಜ್ಯರಾದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಕಳೆದ 8 ತಿಂಗಳುಗಳಿಮದ ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದ್ದು,ಸರಕಾರ ಇದುವರೆಗೂ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ,ಆದ್ದರಿಂದ ನಮ್ಮ ರಾಜ್ಯ ನಾಯಕರ ಸಲಹೆಯಂತೆ ಈಬಾರಿಯ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ರಾಜ್ಯದಲ್ಲಿನ ನಮ್ಮೆಲ್ಲ ಸಮುದಾಯದ ಜನರು ಬಹಿಷ್ಕರಿಸುತ್ತಿರುವುದಾಗಿ ತಿಳಿಸಿದರು.

ಅಲ್ಲದೆ ಕೂಡಲೇ ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಇಲ್ಲವಾದಲ್ಲಿ ಮುಂಬರುವ ಅಕ್ಟೋಬರ್ 09 ರಂದು ವಿಧಾನಸೌಧ ಮುತ್ತಿಗೆ ಹಾಕಲು ಮುಂದಾಗುವುದಾಗಿ ಎಚ್ಚರಿಸಿದರು.ಅಲ್ಲದೆ ಪೂರ್ವಭಾವಿ ಸಭೆಗೆ ಅನೇಕ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸದ ಕಾರಣ ಅನೇಕರು ಆಕ್ರೋಶ ವ್ಯಕ್ತಪಡಿಸಿ ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಕ್ರಮ ಕಯಗೊಳ್ಳುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರರು ಮಾತನಾಡಿ,ಅಕ್ಟೋಬರ್ 9 ರಂದು ಬೆಳಿಗ್ಗೆ ತಾಲೂಕು ಆಡಳಿತದಿಂದ ನಗರದ ಡೊಣ್ಣಿಗೇರಾದಲ್ಲಿನ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.ಅಲ್ಲದೆ ತಾಲೂಕಿನ ಎಲ್ಲಾ ಕಚೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮತ್ತು ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವಂತೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಎ.ಡಿ ಸತ್ಯನಾರಾಯಣ ದರಬಾರಿ,ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ,ಶ್ರೀಮಹರ್ಷಿ ವಾಲ್ಮೀಕಿ ನಿಗಮದ ಅಧಿಕಾರಿ ಉಪಸ್ಥಿತರಿದ್ದರು.ಸಭೆಯಲ್ಲಿ ಮುಖಂಡರಾದ ವೆಂಕೋಬ ದೊರೆ,ಗಂಗಾಧರ ನಾಯಕ ತಿಂಥಣಿ,ರಮೇಶ ದೊರೆ ಆಲ್ದಾಳ,ವೆಂಕಟೇಶ ಬೇಟೆಗಾರ,ವೆಂಕಟೇಶ ನಾಯಕ ಬೈರಿಮಡ್ಡಿ,ಹಣಮಂತ ಕಟ್ಟಿಮನಿ,ಶಂಕರಗೌಡ ಪಾಟೀಲ,ಚಂದ್ರಶೇಖರ ದೊರಿ,ಮುಕಪ್ಪ ದೊರೆ ಬಿಚ್ಚಗತ್ತಿಕೇರಿ,ಭೀಮು ನಾಯಕ ಮಲ್ಲಿಬಾವಿ,ಹಣಮೆಗೌಡ ಶಖಾಪುರ,ಮರಿಲಿಂಪ್ಪ ಅಡ್ಡೊಡಗಿ,ಪರಮಣ್ಣ ನಾಯಕ ಕಕ್ಕೇರಾ,ದೇವಿಂದ್ರಪ್ಪ ಹಾಲಬಾವಿ,ಮರೆಪ್ಪ ನಾಯಕ ಗುಡ್ಡಕಾಯಿ,ಸಿದ್ದಲಿಂಗಪ್ಪ ಬಿರೆದಾರ, ಭರತರಾಜ ಹಾಲಬಾವಿ,ದೇವೆಂದ್ರ ಮಕಾಶಿ,ರವಿಚಂದ್ರ ದರಬಾರಿ,ದೇವರಾಜ ಜಂಬಲದಿನ್ನಿ,ಭೀಮಣ್ಣ ದೊರೆ,ಹಣಮಂತ್ರಾಯಗೌಡ ಮೇಟಿಗೌಡ,ನಾಗರಾಜ ಪ್ಯಾಪ್ಲಿ,ಗೋಪಾಲ ದರಬಾರಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here