ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ನಾನಾ ಇಲಾಖೆಗಳಿಂದ ನಿಯೋಜನೆ ಮೇಲೆ ಪಾಲಿಕೆಗೆ ವರ್ಗಾವಣೆಗೊಂಡು ಕೆಲಸ ಮಾಡುತ್ತಿರುವ ಸಿಬ್ಬಂದಿಗಳನ್ನು ಕೂಡಲೇ ಮೂಲ ಇಲಾಖೆಗಳಿಗೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ಭಾರತೀಯ ಯುವ ಸೈನ್ಯದ ಸದಸ್ಯರು ಪಾಲಿಕೆ ಎದುರು ಪ್ರತಿಭಟನೆ ಮಾಡಿದರು.
ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿರುವ ಸಂಘಟನೆ ಮುಖಂಡರು, ಕಳೆದ ಹಲವಾರು ವರ್ಷಗಳಿಂದ ಪಾಲಿಕೆ ಮೂಲ ಸಿಬ್ಬಂದಿ ಬೇರೆ ಜಿಲ್ಲೆ ಊರುಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ನಾನಾ ಇಲಾಖೆ ಸಿಬ್ಬಂದಿ ನಿಯೋಜನೆಯಲ್ಲಿದ್ದಾರೆ. ಇದರಿಂದ ಪಾಲಿಕೆ ಕೆಲಸವೂ ಅಷ್ಟಕಷ್ಟೆ ನಡೆಯುತ್ತಿದೆ. ಆದ್ದರಿಂದ ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸೈನ್ಯಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಚಿಂಚನಸೂರು, ಮಹಿಳಾ ಘಟಕದ ಅಧ್ಯಕ್ಷೆ ಸೋನುಬಾಯಿ ಶೃಂಗೇರಿ, ರಾಜಶೇಖರ ಹೆರೂರು, ಗಣೇಶ ಕಟ್ಟಿಮನಿ, ಗೌತಮ್ ಹರಸೂರು, ಅಮಿತಕುಮಾರ, ಬಾಗೇಶ ಶಹಾಬಾದ, ರಾಹುಲ್ ಸೂರ್ಯವಂಶಿ, ಪ್ರಶಾಂತ ಹೂಗಾರ, ಬಸವರಾಜ ಬೇಲೂರು ಮತ್ತಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…