ಪ್ರಾಣಿಗಳ ಮೇಲಿನ ದೌರ್ಜನ್ಯ ಕಂಡುಬಂದಲ್ಲಿ ಜೈಲು ಶಿಕ್ಷೆ

0
19

ಬೆಂಗಳೂರು: ರಾಜ್ಯಾದ್ಯಂತ ಪ್ರಾಣಿಗಳ ಮೇಲೆ ದೌರ್ಜನ್ಯ ಮತ್ತು ಕ್ರೌರ್ಯಗಳು ಹೆಚ್ಚಾಗುತ್ತಿರುವ ಪ್ರಕರಣಗಳು ಸಾಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ವರದಿಯಾಗುತ್ತಿದೆ ಹಾಗೂ ಬೀದಿ ನಾಯಿಗಳ ಆರೈಕೆದಾರರು / ಪೀಡರ್ಸ್ಗಳಿಗೆ ಕಿರುಕುಳ ಮತ್ತು ಅನ್ಯಾಯಕ್ಕೆ ಒಳಗಾಗುತ್ತಿರುವ ಬಗ್ಗೆ ವಿವಿಧ ದೂರುಗಳು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ಸ್ವೀಕೃತಗೊಂಡಿವೆ.

ಇತ್ತೀಚೆಗೆ ಬೆಳಗಾವಿ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಈ ರೀತಿಯ ಪ್ರಕರಣಗಳು ದಾಖಲಾಗಿದೆ. ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1960 ರ ಪ್ರಕಾರ ಪ್ರಾಣಿಗಳಿಗೆ ನೋವು / ಯಾತನೆ ತೊಂದರೆ/ದೌರ್ಜನ್ಯ ಮಾಡುವುದು ನಿಷಿದ್ಧ ಹಾಗೂ ಭಾರತೀಯ ದಂಡ ಸಂಹಿತೆ ಅನುಚ್ಛೇದ 428 ಮತ್ತು 429 ರ ಪ್ರಕಾರ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು.

Contact Your\'s Advertisement; 9902492681

ಬೀದಿ ನಾಯಿಗಳನ್ನು ಹೊಡೆಯುವುದು ಓಡಿಸುವುದು / ಎಸೆಯುವುದು ಮತ್ತು ಕೊಲ್ಲುವುದು ಶಿಕ್ಷಾರ್ಹ ಅಪರಾಧ. ಆದರೆ ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ನಿಯಮ 2001 ರನ್ವಯ ಪ್ರಾಣಿ ಸಂತಾನಹರಣ ಚಿಕಿತ್ಸೆಗೆ ಒಳಪಡಿಸಿದ ನಂತರ ಲಸಿಕೆ ನೀಡಿ, ಅವುಗಳ ಮೂಲ ಸ್ಥಾನಕ್ಕೆ ಬಿಡುವುದು.

ಯಾವುದೇ ವ್ಯಕ್ತಿಗಳು /ಸ್ಥಳೀಯ ಪ್ರಾಧಿಕಾರಗಳು ಅಂದರೆ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್ / ಪುರಸಭೆ / ನಗರ ಸಭೆಗಳು ಬೀದಿ ನಾಯಿಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸತಾಂತರಿಸುವುದು ಕಾನೂನು ಪ್ರಕಾರ ನಿಷಿದ್ಧ ಹಾಗೂ ಶಿಕ್ಷಾರ್ಹ ಅವರಾಧ.

ಬೀದಿ ನಾಯಿಗಳು / ಬಿಡಾಡಿ ಧನಗಳಿಗೆ ಆರೈಕೆ ಮಾಡುವುದು, ಆಹಾರ ನೀಡುವುದು ಹಾಗೂ ಕರುಣೆ ತೋರುವುದು ಸಂವಿಧಾನದ ಪ್ರಕಾರ ನಾಗರೀಕರ ಜವಾಬ್ದಾರಿಯಾಗಿರುತ್ತದೆ.

ಪ್ರಾಣಿಗಳ ಮೇಲಿನ ಎಲ್ಲಾ ದೌರ್ಜನ್ಯಗಳನ್ನು ದಾಖಲೆ ಮಾಡಿ, ನಿಯಮಾನುಸಾರ ಕ್ರಮ ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಿರಲು ತಿಳಿಸಿದೆ.

ಎಲ್ಲಾ ಸಾರ್ವಜನಿಕರಲ್ಲಿ / ಸಂಘ ಸಂಸ್ಥೆಗಳಲ್ಲಿ ಕೋರುವುದೇನೆಂದರೆ, ಬೀದಿ ನಾಯಿಗಳ ಆರೈಕೆದಾರರು, ಪೀಡರ್ಸ್ಗಳಿಗೆ ಯಾವುದೇ ರೀತಿಯ ಕಿರುಕುಳ, ತೊಂದರೆ ನೀಡದಂತೆ ಅಧಿಕೃತ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ಪೊಲೀಸ್‍ ಕಂಟ್ರೋಲ್‍ ರೂಂ 112 ಅಥವಾ ಪಶುಸಂಗೋಪನಾ ಸಹಾಯವಾಣಿ ಸಂಖ್ಯೆ 8277100200 ಗೆ ಸಂಪರ್ಕಿಸುವುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here