ಸುರಪುರ: ನಗರದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷದಿಂದ ನಗರಸಭೆ ಮುಂದೆ ಧರಣಿ ನಡೆಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಮಾತನಾಡಿ,ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತುಂಬಾ ಇದ್ದು ಎಲ್ಲಾ ವಾರ್ಡ್‍ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದರು.ಅಲ್ಲದೆ ನಗರದಲ್ಲಿನ ವಿವಿಧ ಸ್ಮಶಾನಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲ,ದೀಪಗಳ ಅಳವಡಿಕೆ,ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಇನ್ನು ನಗರದಲ್ಲಿನ ಚರಂಡಿಗಳು ಸ್ವಚ್ಛತೆ ಇಲ್ಲದೆ ಎಲ್ಲೆಡೆ ಸೊಳ್ಳೆಗಳ ಕಾಟ ಹೇಳತೀರದಾಗಿದ್ದು ಜನರು ಸಾಂಕ್ರಾಮಿಕ ರೋಗಗಳ ಭೀತಿ ಹೆದುರಿಸುವಂತಾಗಿದೆ ಆದ್ದರಿಂದ ಸ್ವಚ್ಛತೆಗೆ ಕ್ರಮ ಕ್ರಮಕೈಗೊಳ್ಳಬೇಕು.ಈ ಎಲ್ಲಾ ಬೇಡಿಕೆಗಳನ್ನು ಒಂದು ವಾರದೊಳಗೆ ಈಡೇರಿಸದಿದ್ದಲ್ಲಿ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ನಂತರ ನಗರಸಭೆ ಅಧ್ಯಕ್ಷೆ ಸುಜಾತಾ ವಿ.ಜೇವರ್ಗಿ ಹಾಗೂ ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶೌಖತ್ ಅಲಿ,ತಿಪ್ಪಣ್ಣ ಪೊಲೀಸ್ ಪಾಟೀಲ್,ಅಲ್ತಾಫ್ ಸಗರಿ,ಎಮ್.ಡಿ ಮಹಿಬೂಬ,ಆಸೀಫ್ ಖುರೇಶಿ,ಮತೀನ ಖುರೇಶಿ,ಎಮ್.ಡಿ ಗೌಸ್ ಬಾಬಾ,ಸೋಹಿದ್,ಅಬ್ದುಲ್ ಅಜೀಜ್,ಫಾರೂಕ್ ಅಸ್ಫಾಕ್,ಎಮ್.ಡಿ ಅದೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.