ಬಿಸಿ ಬಿಸಿ ಸುದ್ದಿ

ಸೃಜನಶೀಲ ವ್ಯಕ್ತಿತ್ವ ಬೆಳೆಸಲು ಎನ್.ಎಸ್.ಎಸ್ ಪೂರಕ

ಕಲಬುರಗಿ: ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತು, ದೇಶಭಕ್ತಿ, ರಾಷ್ಟ್ರೀಯ ಪ್ರಜ್ಞೆ, ಮಾನವೀಯ ಹಾಗೂ ನೈತಿಕ ಮೌಲ್ಯಗಳು, ಸಮಯಪ್ರಜ್ಞೆ, ಬದ್ದತೆ, ಜವಾಬ್ದಾರಿ, ಪ್ರಾಮಾಣಿಕತೆ, ನಿಶ್ಚಿತ ಗುರಿ, ನಾಯಕತ್ವದ ಗುಣಗಳು, ಪ್ರಯತ್ನಶೀಲ ಗುಣಗಳು, ಪರಿಸರ ಸಂರಕ್ಷಣೆ, ಕಾಯಕ ಪ್ರಜ್ಞೆ, ಸ್ವಚ್ಚತೆ, ಶ್ರಮದಾನ ಸೇರಿದಂತೆ ಅಂಶಗಳನ್ನು ಅಳವಡಿಸಿಕೊಂಡು ಸೃಜನಶೀಲ, ಅಪರೂಪದ ವ್ಯಕ್ತಿತ್ವ ಬೆಳೆಸಲು ಎನ್.ಎಸ್.ಎಸ್ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಮಾಡಿಕೊಳ್ಳಲು ಶಾಸಕ ಡಾ.ಅಜಯಸಿಂಗ್ ಸಲಹೆ ನೀಡಿದರು.

ಜೇವರ್ಗಿ ಪಟ್ಟಣದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಇಲ್ಲಿನ ಬಸವೇಶ್ವರ ವೃತ್ತದ ಬಳಿಯಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಯಾವುದೇ ವ್ಯಕ್ತಿ ಜೀವನದಲ್ಲಿ ಉನ್ನತವಾದ ಸಾಧನೆ ಮಾಡಬೇಕಾದರೆ ಬದ್ಧತೆ ಅಗತ್ಯ. ಸಮಯದ ಸದುಪಯೋಗ ಮಾಡಿಕೊಳ್ಳಬೇಕು. ಯಾವುದೇ ಕೆಲಸವನ್ನು ಶೃದ್ಧೆ, ನಿಷ್ಠೆಯಿಂದ ಮಾಡಿದರೆ ಅದು ಸಾರ್ಥಕತೆ ಪಡೆಯಲು ಸಾಧ್ಯವಿದೆ. ಕಾಯಕದಲ್ಲಿ ಮೇಲು-ಕೀಳು ಸಲ್ಲದು. ಕಸಗುಡಿಸುವ ಕಾರ್ಯ ಕೀಳೆಂದು ಭಾವಿಸದೆ ಶ್ರಮದಾನ ಮಾಡಿ. ಸಸಿಗಳನ್ನು ನೆಟ್ಟು ಪೋಷಿಸಿ. ಪರಿಸರ ಕಾಪಾಡುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಈ ಕಾಲೇಜು ಮಾದರಿಯ ಕೆಲಸವನ್ನು ಮಾಡುತ್ತಿದೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಿಬಿಸಿ ಉಪಾಧ್ಯಕ್ಷ ರವೀಂದ್ರ ವೈ.ಕೋಳಕೂರ್, ಮುಖಂಡರಾದ ಚಂದ್ರಶೇಖರ ಹರನಾಳ, ಷಣ್ಮುಖಪ್ಪಗೌಡ್ ಹಿರೇಗೌಟ್, ಷಣ್ಮುಖಪ್ಪಗೌಡ್ ಪಾಟೀಲ, ಗುರು ಸುಬೇದಾರ, ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ಅಲ್ಲಾಉದ್ದೀನ್ ಸಾಗರ, ಸರ್ಕಾರಿ ಸ್ವತಂತ್ರ ಪಿಯು ಕಾಲೇಜಿನ ಪ್ರಾಚಾರ್ಯ ಬಸವರಾಜ ಬಿರಾಜಾದಾರ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪುರಕರ್, ರವೀಂದ್ರಕುಮಾರ ಬಟಗೇರಿ, ಪ್ರಕಾಶ ಪಾಟೀಲ, ನಯಿಮಾ ನಾಹಿದ್, ರೇಣುಕಾ ಚಿಕ್ಕಮೇಟಿ, ಪ್ರ.ದ.ಸ ನೇಸರ ಎಂ.ಬೀಳಗಿ ಹಾಗೂ ಸ್ವಯಂ ಸೇವಕರು ಭಾಗವಹಿಸಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

11 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

22 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

22 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 day ago