ಶಹಾಬಾದ: ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್ ಬಳಕೆ ತ್ಯಜಿಸುವಂತೆ ನಗರಸಭೆಯ ಪೌರಾಯುಕ್ತ ಅಶೋಕ ಬಿಲಗುಂದಿ ಹೇಳಿದರು.
ಅವರು ಸೋಮವಾರ ನಗರಸಭೆಯಿಂದ ಸ್ವಚ್ಛತೆಗಾಗಿ ಸಂಯುಕ್ತ ಭಾರತ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಪ್ಲಾಸ್ಟಿಕ್ ನಿμÉೀಧ ಹಾಗೂ ಪರಿಸರ ಸ್ವಚ್ಛತೆಯ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರಸಭೆಯ ವ್ಯಾಪ್ತಿಯಲ್ಲಿ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ನಿμÉೀಧ ಮಾಡಲಾಗಿದ್ದು, ಸಾರ್ವಜನಿಕರು, ಅಂಗಡಿ ಮುಂಗಟ್ಟುಗಳ ಮಾಲಿಕರು ಮಾರಾಟ ಮಾಡುವುದನ್ನು ಬಿಟ್ಟು ಸಹಕಾರ ನೀಡಬೇಕು ಎಂದು ಹೇಳಿದರು. ನಿμÉೀಧಿತ ಪ್ಲಾಸ್ಟಿಕ್ ಮಾರಾಟ ಮಾಡಿದ್ದಲ್ಲಿ, ಅಂತಹ ಅಂಗಡಿ ಮಾಲಿಕರಿಗೆ ದಂಡ ವಿಧಿಸಲಾಗುವುದು ಎಂದು ಹೇಳಿದರು.
ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಮಾತನಾಡಿ, ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಅನ್ನು ತ್ಯಜಿಸುವ ನಿರ್ಧಾರವನ್ನು ಪ್ರತಿಯೊಬ್ಬರೂ ಮಾಡಬೇಕಿದೆ . ಕೇವಲ ಅಧಿಕಾರಿಗಳಿಂದ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ . ಸಾರ್ವಜನಿಕರ ಸಹಭಾಗಿತ್ವ ಮುಖ್ಯವಾಗಿದೆ ಎಂದು ತಿಳಿಸಿದರು .ಪ್ಲಾಸ್ಟಿಕ್ ಬದಲಿಗೆ ಪರಿಸರ ಸ್ನೇಹಿ ಕಾಗದ ಆಥವಾ ಬಟ್ಟೆ ಉತ್ಪನ್ನ ಬಳಸುವುದರೊಂದಿಗೆ ಪರಿಸರ ಸಮತೋಲನಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷೆ ಸಲೀಮಾಬೇಗಂ,ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ವಾಲಿ,ನಗರಸಭೆಯ ಸದಸ್ಯರಾದ ಸಾಬೇರಾಬೇಗಂ,ಪಾರ್ವತಿ ಪವಾರ, ಪೀರಮ್ಮ ಪಗಲಾಪೂರ,ಭಾಗಿರಥಿ ಗುನ್ನಾಪೂರ,ಸೂರ್ಯಕಾಂತ ಕೋಬಾಳ,ರವಿ ರಾಠೋಡ, ಭೀಮಯ್ಯ ಗುತ್ತೆದಾರ,ನಗರಸಭೆಯ ಎಇಇ ಮುಜಾಮಿಲ್ ಅಲಂ,ಕಚೇರಿ ವ್ಯವಸ್ಥಾಪಕ ಶರಣಗೌಡ ಪಾಟೀಲ, ಆರೋಗ್ಯ ನಿರೀಕ್ಷರಾದ ಶಿವರಾಜಕುಮಾರ, ಮಹೊನೊದ್ದಿನ್, ಶರಣು ,ರಾಜೇಶ, ಸಮುದಾಯ ಸಂಘಟಕ ಅಧಿಕಾರಿ ರಘುನಾಥ ನರಸಾಳೆ, ಸೇರಿದಂತೆ ಪೌರಕಾರ್ಮಿಕರು ಹಾಗೂ ಶಾಲಾ ಮಕ್ಕಳು ಇದ್ದರು.