ಕಲಬುರಗಿ: ಸ್ವಚ್ಛತೆಯ ರಾಯಭಾರಿಗಳಾಗಿರುವ ಪೌರಕಾರ್ಮಿಕರಿಗೆ ಬೆಳಗಿನ ಉಪಹಾರವನ್ನು ಸರಿಯಾದ ಸಮಯಕ್ಕೆ ಪೂರೈಸಬೇಕು ಮತ್ತು ಅದು ಗುಣಮಟ್ಟದಿಂದ ಕೂಡಿರಬೇಕು ಎಂದು ಡಿ.ಸಿ. ಯಶವಂತ ವಿ. ಗುರುಕರ್ ಹೇಳಿದರು.
ಬುಧವಾರ ಜಿಲ್ಲಾ ಮಟ್ಟದ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ನೇಮಕಾತಿ ಪರತಿಬಂಧಕ ಮತ್ತು ಪುನರ್‍ವಸತಿ ಅಧಿನಿಯಮ-2013ರ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪೂರೈಸಬೇಕು. ರ್ಸಾರದಿಂದ ನಿಗದಿಪಡಿಸಿದಂತೆ ವೇತನ ಸರಿಯಾದ ಸಮಯಕ್ಕೆ ನೀಡಬೇಕು. ಪಿ.ಎಫ್., ಇ.ಎಸ್.ಐ ಕಡಿತ ಮಾಡುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ನಿಯಮಿತವಾಗಿ ಆರೋಗ್ಯ ಶಿಬಿರ ಆಯೋಜಿಸಬೇಕು. ಸ್ವಚ್ಛತಾ ಕೆಲಸಕ್ಕೆ ಬೇಕಾಗುವ ಎಲ್ಲಾ ಪರಿಕರಗಳನ್ನು ನೀಡಬೇಕೆಂದು ಸ್ಥಳೀಯ ಪೌರ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಸೇವೆಗಳಲ್ಲಿ ಎಲ್ಲಾದರು ವ್ಯತ್ಯಯವಾದಲ್ಲಿ ಸಮರ್ಪಕ ಅನುಷ್ಠಾನವಾಗದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿನ ಪೌರಕಾರ್ಮಿಕರ ನೇಮಕಾತಿ ನೆನೆಗುದ್ದಿಗೆ ಬಿದ್ದಿದೆ ಎಂದು ಸಮಿತಿಯ ಸದಸ್ಯರು ಡಿ.ಸಿ. ಗಮನಕ್ಕೆ ತಂದರು. ನೇಮಕಾತಿಗೆ ಸಂಬಂಧಿಸಿದಂತೆ ಪ್ರಕರಣ ನ್ಯಾಯಾಲಯದಲ್ಲಿದ್ದು, ತೀರ್ಪು ಬಂದ ನಂತರ ಮುಂದಿನ ಕ್ರಮ ವಹಿಸಲಾಗುವುದು ಎಂದು ಡಿ.ಸಿ. ಅವರು ತಿಳಿಸಿದರು.
214 ಪೌರ ಕಾರ್ಮಿಕರಿಗೆ ಜಿ+2 ಮನೆ: ಕಲಬುರಗಿ ಮಹಾನಗರ ಪಾಲಿಕೆಯ 214 ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ನಗರದ ಫಿಲ್ಟರ್ ಬೆಡ್ ಪ್ರದೇಶದಲ್ಲಿ ಜಿ+2 ಮಾದರಿಯಲ್ಲಿ ಮನೆ ನಿರ್ಮಿಸಲಾಗುತ್ತಿದೆ ಎಂದು ಪಾಲಿಕೆಯ ಉಪ ಆಯುಕ್ತ ಆರ್.ಪಿ.ಜಾಧವ ಸಭೆಯ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಡಿ.ಸಿ. ಯಶವಂತ ವಿ. ಗುರುಕರ್ ಮಾತನಾಡಿ, ಜಿಲ್ಲೆಯ ಉಳಿದ ಇತರೆ ಪಟ್ಟಣಗಳಲ್ಲಿ ಮನೆ ಇಲ್ಲದ ಪೌರಕಾರ್ಮಿಕರಿಗೆ ಜಮೀನು ಖರೀದಿ ಮಾಡಿ ಮನೆ ನಿರ್ಮಿಸಿ ಕೊಡಬೇಕು ಎಂದು ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
196 ಮ್ಯಾನುವೆಲ್ ಸ್ಕ್ಯಾವೆಂಜರ್: 2018ರ ಸಮೀಕ್ಷೆ ಪ್ರಕಾರ ಕಲಬುರಗಿ ಮಹಾನಗರದಲ್ಲಿ 112 ಸೇರಿದಂತೆ ಜಿಲ್ಲೆಯಾದ್ಯಂತ 196 ಮ್ಯಾನುವೆಲ್ ಸ್ಕ್ಯಾವೆಂಜರ್‍ಗಳಿದ್ದಾರೆ. ಸಮೀಕ್ಷೆಯಿಂದ ಹೊರಗುಳಿದ ಸಫಾಯಿ ಕರ್ಮಚಾರಿಗಳಿದಲ್ಲಿ ಸಮಿತಿಯ ಸದಸ್ಯರು ಸಮಿತಿಯ ಗಮನಕ್ಕೆ ತರಬೇಕು ಎಂದು ಡಿ.ಸಿ. ಯಶವಂತ ವಿ ಗುರುಕರ್ ತಿಳಿಸಿದರು. ಈ ಸಂದರ್ಭದಲ್ಲಿ ಡಿ.ಯು.ಡಿ.ಸಿ. ಯೋಜನಾ ನಿರ್ದೇಶಕ ಶರಣಬಸಪ್ಪ ಬೆಣ್ಣೂರು ಮಾತನಾಡಿ, ಜಿಲ್ಲೆಯಾದ್ಯಂತ 9 ಸಕ್ಕಿಂಗ್ ಯಂತ್ರ ಮತ್ತು 11 ಜಟ್ಟಿಂಗ್ ಯಂತ್ರಗಳಿವೆ ಎಂದು ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ ಅವರು ಹಿಂದಿನ ಸಭೆಯ ನಡಾವಳಿ ಮೇಲೆ ತೆಗೆದುಕೊಂಡ ಕ್ರಮಗಳು ಮತ್ತು ಪ್ರಗತಿ ಕುರಿತು ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಅಧಿಕಾರೇತರ ಸಮಿತಿ ಸದಸ್ಯರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…