ನೇರ ಸಾಲ ಯೋಜನೆಯಡಿ ಅರ್ಜಿ ಆಹ್ವಾನ

0
213

ಕಲಬುರಗಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ನೇರ ಸಾಲ ಯೋಜನೆಯಡಿ ವ್ಯಾಪಾರ/ಉದ್ದಿಮೆ ಚಟುವಟಿಕೆ ಕೈಗೊಳ್ಳಬಯಸುವ ಫಲಾನುಭವಿಗಳಿಗೆ ಆಸ್ತಿಯ (ಕಟ್ಟಡ/ಭೂಮಿ) ಅಡಮಾನದ ಮೇಲೆ ಸಾಲವನ್ನು ಒದಗಿಸಲಾಗುತ್ತಿದ್ದು, ಇದಕ್ಕಾಗಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿಬೇಕು. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. ಅರ್ಜಿದಾರರು ಕೆ.ಎಂ.ಡಿ.ಸಿ. ಗೆ ಸುಸ್ತಿದಾರರಾಗಿರಬಾರದು. ಆಸ್ತಿಯ (ಕಟ್ಟಡ/ಭೂಮಿ) ಅಡಮಾನದ ಮೇಲೆ ಮಾತ್ರ ಸಾಲವನ್ನು ಒದಗಿಸಲಾಗುತ್ತದೆ. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆಯಿರಬಾರದು. ವ್ಯಾಪಾರ ಉದ್ದಿಮೆ ಸಾಲವನ್ನು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ನೀಡಲಾಗುತ್ತದೆ.

Contact Your\'s Advertisement; 9902492681

ಅರ್ಹ ಅಭ್ಯರ್ಥಿಗಳು www.awards.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2022ರ ನವೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಆನ್‍ಲೈನ್ ಅರ್ಜಿಯ ಪ್ರತಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ನಿಗಮದ ಕಲಬುರಗಿ ಕಚೇರಿಗೆ 2022ರ ನವೆಂಬರ್ 21 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು, ಕಚೇರಿ ದೂರವಾಣಿ ಸಂಖ್ಯೆ 08472-232425 ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ 8277799990 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here