ಸುರಪುರ: ನಿತ್ಯವು ಶಾಲಾ ಮಕ್ಕಳನ್ನು ಕರೆತಂದು ಮರಳಿ ಕರೆದುಕೊಂಡು ಹೋಗಿ ಬಿಡುತ್ತಿದ್ದ ಖಾಸಗಿ ವಾಹನವೊಂದು ರಸ್ತೆ ಪಕ್ಕಕ್ಕೆ ಉರುಳಿದ ಪರಿಣಾದ 8 ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ.
ಟಾಟಾ ಮ್ಯಾಜಿಕ್ ವಾಹನವು ಲಕ್ಷ್ಮೀಪುರ ಗ್ರಾಮದ ವ್ಯಕ್ತಿಗೆ ಸೇರಿದ್ದು ಎಂದು ಹೇಳಲಾಗುತ್ತಿದೆ.ನಿತ್ಯವು ಕರ್ನಾಳ,ಹೆಮನೂರ,ಶಖಾಪುರ ಗ್ರಾಮದಿಂದ ಸುಮಾರು ಇಪ್ಪತ್ತು ಮಕ್ಕಳನ್ನು ನಗರದ ಪ್ರೇರಣಾ ಮತ್ತು ಶೆಟ್ಟಿ ಶಿಕ್ಷಣ ಸಂಸ್ಥೆಗೆ ಕರೆತಂದು ಮರಳಿ ಕರೆದುಕೊಂಡು ಆಯಾ ಗ್ರಾಮಗಳಿಗೆ ತಲುಪಿಸುತ್ತಿತ್ತು.ಗುರುವಾರ ಮದ್ಹ್ಯಾನ ಮರಳಿ ಊರಿಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಸತ್ಯಂಪೇಟೆಯ ಮುಂದೆ ಶಖಾಪುರ ರಸ್ತೆಯಲ್ಲಿ ಹೋಗುತ್ತಿರುವ ವಾಹನ ರಸ್ತೆ ಪಕ್ಕಕ್ಕೆ ಉರುಳಿದೆ,ಇದರಿಂದ ವಾಹನದಲ್ಲಿದ್ದ ಮಕ್ಕಳಲ್ಲಿ ಸುಮಾರು 8 ಮಕ್ಕಳು ಗಾಯಗೊಂಡಿದ್ದು,ನಂತರ ಎಲ್ಲಾ ಮಕ್ಕಳನ್ನು ಸುರಪುರ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು.ಇದರಲ್ಲಿ ಇಬ್ಬರು ಮಕ್ಕಳಿಗೆ ಗಂಭೀರವಾಗಿ ಗಾಯಗಳಾಗಿದ್ದರಿಂದ ಕಲಬುರ್ಗಿ ಆಸ್ಪತ್ರೆಗೆ ರವಾನಿಸಲಾಗಿದ್ದು,ಇನ್ನುಳಿದ ಆರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದ್ದು ಗುಣಮುಖರಾಗಿದ್ದಾರೆ ಎಂದು ಆಸ್ಪತ್ರೆಗೆ ಭೇಟಿ ನೀಡಿದ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ತಿಳಿಸಿದ್ದಾರೆ.
ಆಸ್ಪತ್ರೆಗೆ ಗಣ್ಯರು ಭೇಟಿ: ಶಾಲಾ ಮಕ್ಕಳ ತುಂಬಿಕೊಂಡು ಹೋಗುತ್ತಿದ್ದ ವಾಹನ ಪಲ್ಟಿಯಾಗಿ ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಅನೇಕ ಗಣ್ಯರು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ,ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಪ್ರವೀಣಕುಮಾ ನಾಯಕ ಡೊಣ್ಣಿಗೇರಾ ಸೇರಿದಂತೆ ಅನೇಕರು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
ಅಲ್ಲದೆ ಆಸ್ಪತ್ರೆಯಲ್ಲಿನ ವೈದ್ಯರಿಗು ಭೇಟಿ ಮಾಡಿ ಸರಿಯಾದ ಚಿಕಿತ್ಸೆಯನ್ನು ನೀಡುವಂತೆ ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಸೇರಿದಂತೆ ಅನೇಕ ಮುಖಂಡರು ಹಾಗೂ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳಿದ್ದರು.