ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳು ಉತ್ಸಾಹದಿಂದ ಕಲೋತ್ಸವದಲ್ಲಿ ಭಾಗವಹಿಸಿ ಕೀರ್ತಿ ತನ್ನಿ: ಸಜ್ಜನ್

ಸುರಪುರ : ವಿದ್ಯಾರ್ಥಿಗಳು ಉತ್ಸಾಹದಿಂದ ಪ್ರತಿಭಾ ಕಾರಂಜಿಯ ಕಲೋತ್ಸವದ ಸ್ಪರ್ಧೆಗಳಲ್ಲಿ ಭಾಗವಹಿಸಿ ಶಾಲೆಗೆ, ಪೋಷಕರಿಗೆ ಮತ್ತು ತಾಲೂಕಿಗೆ ಕೀರ್ತಿ ತರಬೇಕು ಎಂದು ಕಲಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ:ಸುರೇಶ ಆರ್.ಸಜ್ಜನ್ ಮಾತನಾಡಿದರು.

ನಗರದ ಬಾಲಕರ ಸರಕಾರಿ ಪಿಯು ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-2022-23 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಭಾ ಕಾರಂಜಿಯಲ್ಲಿ ಮಕ್ಕಳಲ್ಲಿನ ಕಲೆಯನ್ನು ಪ್ರದರ್ಶಿಸಿಕೊಳ್ಳಲು ಉತ್ತಮ ಅವಕಾಶವಿರುತ್ತದೆ. ತೀರ್ಪುಗಾರರು ಕಾರಂಜಿಯಲ್ಲಿ ಭಾಗವಹಿಸಿರುವ ಎಲ್ಲ ಮಕ್ಕಳು ಒಂದೇ ಎಂಬ ಭಾವನೆಯಿಂದ ಪ್ರತಿಭೆ ಗುರುತಿಸಿ ನ್ಯಾಯಯುತ ತೀರ್ಪು ನೀಡಿ ಆಯ್ಕೆ ಮಾಡಬೇಕು.

ಶ್ರೀಪ್ರಭು ಪದವಿ ಕಾಲೇಜಿನ ನಿವೃತ್ತ ಉಪ ಪ್ರಾಚಾರ್ಯ ವೇಣುಗೋಪಾಲ ನಾಯಕ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ತೋರಿಸಲು ಸರಕಾರ ಪ್ರತಿಭಾ ಕಾರಂಜಿ ಎಂಬ ಸಾಂಸ್ಕøತಿಕ ಕಾರ್ಯಕ್ರಮದ ಯೋಜನೆ ಜಾರಿಗೆ ತಂದಿರುವುದು ಸ್ವಾಗತಾರ್ಹ. ಮಕ್ಕಳು ಉತ್ಸಾಹದಿಂದ ಭಾಗವಹಿಸಿ ಸಂಕೋಚ, ನಾಚಿಕೆ ಪಟ್ಟುಕೊಳ್ಳದೆ, ಭಯಗೊಳ್ಳದೆ ಧೈರ್ಯದಿಂದ ಸ್ಟೇಜ್‍ನಲ್ಲಿ ಪ್ರತಿಭೆ ಎಲ್ಲರಿಗೂ ತೋರಿಸಬೇಕು. ಆಗ ಸಮಾಜ ನಿಮ್ಮ ಪ್ರತಿಭೆ ನೋಡಿ ಹೆಚ್ಚಿನ ಅವಕಾಶ ನೀಡುತ್ತದೆ.ಆದ್ದರಿಂದ ವಿದ್ಯಾರ್ಥಿಗಳು ಈ ಅವಕಾಶವನ್ನು ಕಳೆದುಕೊಳ್ಳಬಾರದು ಎಂದರು.

ಬಿಇಒ ಮಹೇಶ ಪೂಜಾರ ಮಾತನಾಡಿ, ಮಕ್ಕಳಲ್ಲಿರುವ ಕಲೆ, ಬೌದ್ಧಿಕ ಶಕ್ತಿ, ಮಾನಸಿಕ ಬೆಳವಣಿಗೆ, ನಾನಾ ಚಟುವಟಿಕೆ ಪ್ರೇರೇಪಿಸಲು ಸರಕಾರ ರೂಪಿಸಿರುವ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಹಕಾರಿಯಾಗಿವೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಕಾರಂಜಿಯಂತೆ ಚಿಮ್ಮಲು ಇದು ಸೂಕ್ತ ಸ್ಥಳವಾಗಿದೆ. ಎಲ್ಲ ಮಕ್ಕಳು ಯಾವುದೇ ಭಯವಿಲ್ಲದೆ ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಬೇಕು. ಪ್ರೌಢಶಾಲೆ ಮಕ್ಕಳಿಗೆ ರಾಜ್ಯ ಮಟ್ಟದವರೆಗೆ ಪ್ರಾಥಮಿಕ ಮಕ್ಕಳಿಗೆ ಜಿಲ್ಲಾ ಮಟ್ಟದವರೆಗೆ ಅವಕಾಶವಿರುತ್ತದೆ. ಕಾರಣ ತೀರ್ಪುಗಾರರು ನಿಜವಾದ ಪ್ರತಿಭೆಗಳನ್ನು ಗುರುತಿಸಬೇಕು. ಇದರಿಂದ ಜಿಲ್ಲಾ ಮತ್ತು ರಾಜ್ಯದ ಹಂತಕ್ಕೂ ಹೋಗಲು ಸಾಧ್ಯ ಎಂದು ನುಡಿದರು.

ಜಿಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷೆ ಸುಜಾತಾ ವಿ. ಜೇವರ್ಗಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯ ನರಸಿಂಹಕಾಂತ ಪಂಚಮಗಿರಿ, ಪ್ರಮುಖರಾದ ಪಂಡೀತ ನಿಂಬೂರ, ಮೌನೇಶ ಕಂಬಾರ, ಯಲ್ಲಪ್ಪ ಕಾಡ್ಲೂರು, ಸಂಜೀವ ದರಬಾರಿ, ಯಂಕನಗೌಡ ಅರಿಕೇರಿ, ಗೋವಿಂದ ತನಿಕೇದಾರ, ಬಸನಗೌಡ ವಠಾರ, ಶರಣಗೌಡ ಪಾಟೀಲ್, ಖಾದರ ಪಟೇಲ್, ಶಾಂತಪ್ಪ ಅಗ್ನಿ, ರಾಮಣ್ಣ ಪೂಜಾರಿ, ಜಾಕೀರ್ ಹುಸೇನ್, ಚುನ್ನು ಪಟೇಲ್, ಕೃಷ್ಣ ದರಬಾರಿ, ಅಪ್ಪಣ್ಣ ಕುಲಕರ್ಣಿ, ಮಲ್ಲಿಕಾರ್ಜುನ ಕಟ್ಟಿಮನಿ ಸೇರಿ ಇತರರು ವೇದಿಕೆಯಲ್ಲಿದ್ದರು. ಇಸಿಒ ಹಳೆಪ್ಪ ಖಜಾಂಜಿ ಪ್ರಾಸ್ತಾವಿಕ ಮಾತನಾಡಿದರು. ಭೀಮಣ್ಣ ಹುದ್ದಾರ್ ಪ್ರಾರ್ಥಿಸಿದರು. ಮಹಾದೇವಪ್ಪ ಗುತ್ತೇದಾರ ಸ್ವಾಗತಿಸಿದರು. ಶರಣಬಸವ ಗೋನಾಲ ನಿರೂಪಿಸಿ ವಂದಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago