ಕಲಬುರಗಿ: ನಗರದ ಬಾಪು ನಗರದ ಮಾಂಗರವಾಡಿ ಗಲ್ಲಿಯಲ್ಲಿನ ಮಿಲಿಂದ್ ಕಾಲೇಜು ಹಿಂದುಗಡೆ ಇರುವ ಶಿವಮಂದಿರದ ಆವರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತರನ್ನು ದತ್ತಾತ್ರೇಯ್ ವಿನಾಯಕರಾವ್ ಬಾಲ್ಕೆ, ರಾಹುಲ್ ಆನಂದ್ ಮಾಂಗರವಾಡಿ ಮತ್ತು ಮಹೇಶಕುಮಾರ್ ಉಪಾಧ್ಯಾ ಎಂದು ಗುರುತಿಸಲಾಗಿದೆ. ಬಂಧಿತರಿಂದ ೨೪,೦೦೦ರೂ.ಗಳ ಮೌಲ್ಯದ ಮೂರು ಕೆಜಿ ಗಾಂಜಾ, ೪೨೦೦೦ರೂ.ಗಳ ಮೌಲ್ಯದ ಎರಡು ದ್ವಿಚಕ್ರವಾಹನಗಳು, ೧೯೦೦ರೂ.ಗಳ ಮೌಲ್ಯದ ಮೂರು ಮೊಬೈಲ್‌ಗಳು ಸೇರಿ ಒಟ್ಟು ೬೭,೯೦೦ರೂ.ಗಳ ಮೌಲ್ಯದ್ದನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಭಾತ್ಮಿ ಮೇರೆಗೆ ಬ್ರಹ್ಮಪೂರ್ ಪೋಲಿಸ್ ಠಾಣೆಯ ಪಿಐ ಶ್ರೀಮಂತ್ ಇಲ್ಲಾಳ್ ಅವರ ನೇತೃತ್ವದಲ್ಲಿ ಎಎಸ್‌ಐ ಸಲಿಮೋದ್ದೀನ್, ಸಿಬ್ಬಂದಿಗಳಾದ ಪಂಡಿತ್, ಸುರೇಶ್, ವೆಂಕಟೇಶ್ ಅವರು ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಪ್ರಕರಣದಲ್ಲಿ ಇನ್ನೋರ್ವ ಆರೋಪಿ ಬೀದರ್‌ನ ಇರಾನಿ ಗಲ್ಲಿಯ ನಿವಾಸಿ ಫಿರೋಜ್ ಅಲಿ ರಾಯಕ್ ಅಲಿ ಪರಾರಿಯಾಗಿದ್ದು, ಆತನ ಪತ್ತೆ ಕಾರ್ಯಾಚರಣೆಯನ್ನು ಪೋಲಿಸರು ಮುಂದುವರೆಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…