ಸುರಪುರ: ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪ ಆವರಣದಲ್ಲಿ ಬೆಳಗಾವಿಯ ಶ್ರೀ ನಿರಂಜನಾನಂದ ಮಹಾಸ್ವಾಮೀಜಿಯವರ ಸಾನಿಧ್ಯದಲ್ಲಿ ಕಳೆದ 10 ದಿನಗಳಿಂದ ನಡೆದ ಯೋಗ ಧ್ಯಾನ ಹಾಗೂ ಸಂಜೆಯ ಪ್ರವಚನ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಇಷ್ಟಲಿಂಗ ದೀಕ್ಷೆ ಹಾಗೂ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮ ನಡೆಸಲಾಯಿತು.
ತಾಲೂಕು ವೀರಶೈವ ಲಿಂಗಾಯತ ಸಮಿತಿ,ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ,ಸುರಪುರ ರಾಜಾನಂದ ಶಿಕ್ಷಣ ಮತ್ತು ಆರೋಗ್ಯ ಗ್ರಾಮೀಣಾಭಿವೃಧ್ಧಿ ಸಂಸ್ಥೆ,ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ಹಾಗೂ ಶ್ರೀ ಶರಣ ಸೇವಾ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದ ನೇತೃತ್ವವನ್ನು ಗುರುಮಠಕಲಾ ಖಾಸಾ ಮಠದ ಶಾಂತವೀರ ಗುರುಮುರುಘರಾಜೇಂದ್ರ ಮಹಾಸ್ವಾಮೀಜಿ ಹಾಗೂ ದೇವಾಪುರ ಜಡಿಶಾಂತಲಿಂಗೇಶ್ವರ ಹಿರೇಮಠ ಸಂಸ್ಥಾನದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಕಲಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ:ಸುರೇಶ ಸಜ್ಜನ್ ಭಾಗವಹಿಸಿ ಮಾತನಾಡಿದರು. ಮುಖಂಡರಾದ ವಿರೇಶ ನಿಷ್ಠಿ ದೇಶಮುಖ,ಸಿದ್ದಲಿಂಗಯ್ಯ ಸ್ವಾಮಿ ಕಡ್ಲೆಪ್ಪನವರಮಠ,ಪ್ರಕಾಶ ಅಂಗಡಿ,ಶಿವರಾಜ ಕಲಕೇರಿ,ಚನ್ನಮಲ್ಲಿಕಾರ್ಜುನ ಗುಂಡಾನೂರ ಸೇರಿದಂತೆ ನೂರಾರು ಸಂಖ್ಯೆಯ ಜನ ಭಾಗವಹಿಸಿ ಇಷ್ಟಲಿಂಗ ದೀಕ್ಷೆ ಜೊತೆಗೆ ಸಾಮೂಹಿಕ ಇಷ್ಟಲಿಂಗ ಪೂಜೆ ನೆರವೇರಿಸಿದರು.
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…