ರುಕ್ಮಾಪುರ ಮಹರ್ಷಿ ವಾಲ್ಮೀಕಿ ಶಾಲೆ ವಾಲಿಬಾಲ್ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

0
81

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಮಹರ್ಷಿ ವಾಲ್ಮೀಕಿ ಗ್ರಾಮಾಂತರ ಅನುದಾನಿತ ಪ್ರೌಢ ಶಾಲೆಯ ವಾಲಿಬಾಲ್ ತಂಡ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮಾಡಿದೆ.

ಯಾದಗಿರಿಯಲ್ಲಿ ನಡೆದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ರುಕ್ಮಾಪುರ ಗ್ರಾಮದ ಮಹರ್ಷಿ ವಾಲ್ಮೀಕಿ ಗ್ರಾಮಾಂತರ ಅನುದಾನಿತ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಬಾಲಕರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆಯುವ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

Contact Your\'s Advertisement; 9902492681

ಅಲ್ಲದೆ ಅಥ್ಲೇಟಿಕ್ಸ್ ಸ್ಪರ್ಧೆಯ 100 ಮೀ ಹಾಗೂ 200 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ವಿದ್ಯಾರ್ಥಿ ಮುರುಳಿ ಬಿಲ್ಲವ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು,ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ರಾಜಾ ಪಿಡ್ಡ ನಾಯಕ (ತಾತಾ),ಕಾರ್ಯದರ್ಶಿ ರಾಜಾ ರಂಗಪ್ಪ ನಾಯಕ ಪ್ಯಾಪ್ಲಿ,ಮುಖ್ಯಗುರು ಮಹೇಶ ಕುಂಟೋಜಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು,ಸಿಬ್ಬಂದಿ ವರ್ಗ ಹಾಗು ಗ್ರಾಮದ ಭಾಗನಾಥ ನಾಯಕ ಸೇರಿದಂತೆ ಎಲ್ಲಾ ಕ್ರೀಡಾ ಪ್ರೇಮಿಗಳು ಹರ್ಷ ವ್ಯಕ್ತಪಡಿಸಿದ್ದು ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here