ಅಕ್ಟೋಬರ್ 13 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ

0
42

ಕಲಬುರಗಿ: ರಾಷ್ಟ್ರೀಯ ವೃತ್ತಿ ಸೇವೆ ಯೋಜನೆಯಡಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವ ಪಿಯು ಮತ್ತು ಪದವಿ ಕಾಲೇಜು ಕಲಬುರಗಿ ಇವುಗಳ ಸಹಯೋಗದೊಂದಿಗೆ ಇದೇ ಅಕ್ಟೋಬರ್ 13 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಲಬುರಗಿ ಹೊಸ ಜೇವರ್ಗಿ ರಸ್ತೆಯ ಗೋದುತಾಯಿ ಕಾಲೋನಿಯ ಶಿವ ಪಿಯು ಮತ್ತು ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಎ., .ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಇ., ಎಂ.ಬಿ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಸಿ.ಎ ಹಾಗೂ ಎಂ.ಟೆಕ್. ಪಾಸಾದ ವಯೋಮಿತಿ 18 ರಿಂದ 30 ವರ್ಷದೊಳಗಿನವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

Contact Your\'s Advertisement; 9902492681

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here