ಸುರಪುರ: ತಾಲೂಕು ಹಿಂದುಳಿ ವರ್ಗಗಳ ಇಲಾಖೆಯ(ಬಿಸಿಎಂ) ವತಿಯಿಂದ 2022-23ನೇ ಸಾಲಿಗಾಗಿ ಇಲಾಖೆಯ ಅಧೀನದಲ್ಲಿ ಬರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರೆಡ್ಡಿ ಪಾಟೀಲ ತಿಳಿಸಿದ್ದಾರೆ.
ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳಿಗೆ ಸೇರಿದ 46 ಜಾತಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅರ್ಜಿ ಸಲ್ಲಿಸಲು ಬಯಸುವವರು ಇತರೆ ಯಾವುದೇ ಇಲಾಖೆ/ಯೋಜನೆಯ ವಸತಿ ಸೌಲಭ್ಯವನ್ನು ರೇಷನ್ ಕಾರ್ಡನಲ್ಲಿ ನಮೂದಾಗಿರುವ ಕುಟುಂಬದ ಯಾವುದೇ ಸದಸ್ಯರು ಹೊಂದಿರಬಾರದು ಹಾಗೂ ಕುಟುಂಬದ ವಾರ್ಷಿಕ ವರಮಾನ 2ಲಕ್ಷ ರೂ ಮೀರಿರಬಾರದು, ವಸತಿ ರಹಿತರು ಸ್ವಂತ ನಿವೇಶನ ಹೊಂದಿರಬೇಕು ಹಾಗೂ ನಿವೇಶನವು ಕುಟುಂಬದ ಮಹಿಳೆಯರ ಹೆಸರಿನಲ್ಲಿ ನೊಂದಣಿಯಾಗಿರಬೇಕು.
ಅರ್ಜಿ ಸಲ್ಲಿಸಲು ಇಚ್ಛಿಸುವವರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಿಂದ ಅರ್ಜಿ ಪಡೆದು ಭರ್ತಿಗೊಳಿಸಿ ಅಗತ್ಯ ಮಾಹಿತಿಗಳ ದಾಖಲೆಗಳೊಂದಿಗೆ ಅಕ್ಟೋಬರ್18 ರೊಳಗಾಗಿ ಸಲ್ಲಿಸತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪತ್ರಿಕಾ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…