ಬಿಸಿ ಬಿಸಿ ಸುದ್ದಿ

ಅಕ್ಟೋಬರ್ 9 ರಿಂದ ಇಸ್ಲಾಮಿಕ್ ಚಿತ್ರಕಲಾ ಪ್ರದರ್ಶನ

ಕಲಬುರಗಿ: ಮಿಲಾದ್-ಉನ್-ನಬಿ (ಪ್ರವಾದಿ ಮುಹಮ್ಮದ್ ಅವರ ಜನ್ಮದಿನ) ಮುನ್ನಾದಿನದಂದು ಅಕ್ಟೋಬರ್ 9 ರಂದು ಕಲಬುರಗಿ ನಗರದ ಸಂಗಟರಾಶ್ವಾಡಿ ಜಿಡಿಎ ಲೇಔಟ್ನಲ್ಲಿರುವ ಹಿದಾಯತ್ ಸೆಂಟರ್ನಲ್ಲಿ ಒಂದು ದಿನದ ಇಸ್ಲಾಮಿಕ್ ಕಲಾ ಪ್ರದರ್ಶನವನ್ನು ಆಯೋಜಿಸಲಾಗಿದೆ. ರಾಜ್ಯದಾದ್ಯಂತ ಸುಮಾರು 24 ಕಲಾವಿದರು ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಲಿದ್ದಾರೆ.

ಶೇಖ್ ಸಿರಾಜುದ್ದೀನ್ ಜುನೈದಿ ದರ್ಗಾ ಸಜ್ಜಾದ ನಶೀನ್ ಮುಹಮ್ಮದ್ ಅಫ್ಜಲುದ್ದೀನ್ ಜುನೈದಿ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಖ್ಯಾತ ಕಲಾವಿದ ಡಾ.ಎ.ಎಸ್.ಪಾಟೀಲ, ಸಾಮಾಜಿಕ ಕಾರ್ಯಕರ್ತ ಅಲ್ತಾಫ್ ಇನಾಮದಾರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮಹಮ್ಮದ್ ಕೂನ್ಹಿ ಮಂಗಳೂರು ಉಪನ್ಯಾಸ ನೀಡಲಿದ್ದಾರೆ. ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಮಿನಾಕ್ಷಿ ಬಾಳಿ ಅಧ್ಯಕ್ಷತೆ ವಹಿಸುವರು.

ಪ್ರದರ್ಶನದ ಸಂಚಾಲಕ ಖ್ಯಾತ ಕಲಾವಿದ ಮೊಹಮ್ಮದ್ ಅಯಾಜುದ್ದೀನ್ ಪಟೇಲ್ ಮಾತನಾಡಿ, ಸ್ಮಾರಕಗಳು, ಕ್ಯಾಲಿಗ್ರಫಿ, ಸಾಮಾಜಿಕ-ಸಾಂಸ್ಕøತಿಕ ಜಾಗೃತಿ ಮೂಡಿಸುವ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ನಗರದಲ್ಲಿ ಎರಡನೇ ಬಾರಿಗೆ ಇಂತಹ ಪ್ರದರ್ಶನ ನಡೆಯುತ್ತಿದೆ ಎಂದರು.

ಭಾಗವಹಿಸುವ ಕಲಾವಿದರು: ಮೊಹಮ್ಮದ್ ಅಯಾಜುದ್ದೀನ್ ಪಟೇಲ್, ಸುಬ್ಬಯ್ಯ ನೀಲಾ, ರಾಜಶೇಖರ್ ಎಸ್, ವಾಜಿದ್ ಸಾಜಿದ್, ಟಿ ದೇವೇಂದ್ರ, ಹಾಜಿ ಮಲಾಂಗ್, ರೆಹಮಾನ್ ಪಟೇಲ್, ಮೊಹಮ್ಮದ್ ಸೈಯದ್, ಶಾಹೆದ್ ಪಾμÁ, ಶೇಕ್ ಅಹ್ಸಾನ್, ಹಜರತ್ ಅಲಿ, ಸಲೀಮುದ್ದೀನ್, ಶಾಫಿ ಮಶಲ್ಕರ್, ಮೊಹಮ್ಮದ್ ಜಲೀಲ್, ಮೊಹಮ್ಮದ್ ರಯೀಸ್, ಮೊಹಮ್ಮದ್ ರಯೀಸ್, ಜಲಜಾಕ್ಷಿ ಕುಲಕರ್ಣಿ, ಉಜ್ವಲಾ ಪಾಟೀಲ, ಮಹಮ್ಮದ್ ಮುಸ್ತಫಾ, ಕೆಹಕಶನ್ ನಜನೀನ್, ಶಾಹೀನ್ ಫಾತಿಮಾ, ಸಲ್ಮಾ, ಲಕ್ಷ್ಮೀ ಪೊದ್ದಾರ್ ಮತ್ತು ಕವಿತಾ ಕಟ್ಟೆ ಈ ಸಂದರ್ಭದಲ್ಲಿ ತಮ್ಮ ಕಲಾಕೃತಿಗಳೊಂದಿಗೆ ಭಾಗವಹಿಸಲಿದ್ದಾರೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

10 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

21 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

21 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

23 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

23 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

23 hours ago