ಶಹಾಬಾದ: ನಿವೃತ್ತ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯಕರಿಗೆ ಕಾನೂನು ಪ್ರಕಾರ ಗ್ರಾಚ್ಯುಟಿ ಹಣ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಅಂಗನವಾಡಿ ನೌಕರರ ಸಂಘದ ವತಿಯಿಂದ ಶುಕ್ರವಾರಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು 1972 ಕಾಯ್ದೆ ಪ್ರಕಾರ ಗ್ರಾಚ್ಯುಟಿ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆದ್ದರಿಂದ ನಿವೃತ್ತಿ ಹೊಂದಿದ ಕಾರ್ಯಕರ್ತೆಯರಿಗೆ ಸರ್ಕಾರ ಗ್ರಾಚ್ಯುಟಿ ನೀಡಬೇಕು ಎಂದು ಕರ್ನಾಟಕ ಅಂಗನವಾಡಿ ನೌಕರರ ಸಂಘ ಶಹಾಬಾದ್ ತಾಲ್ಲೂಕು ಸಮಿತಿ ವತಿಯಿಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಬಾಕಿ ಇರುವ ಗ್ರಾಚ್ಯುಟಿ ಹಣದ ಅರ್ಜಿಗಳನ್ನು ಸಲ್ಲಿಸಲಾಯಿತು.
ನಿವೃತ್ತಿ ಹೊಂದಿದ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇಲಾಖೆಯಲ್ಲಿ ಸುಮಾರು 30 ವರ್ಷ ಸೇವೆ ಸಲ್ಲಿಸಿದ್ದಾರೆ. ಆದರೂ ಅವರಿಗೆ ಇಲ್ಲಿಯವರೆಗೆ ಗ್ರಾಚ್ಯುಟಿ ಸೌಲಭ್ಯ ಪಡೆದಿಲ್ಲ. ಇದರಿಂದ ಇವರ ಕುಟುಂಬ ನಿರ್ವಹಣೆ ತುಂಬ ಕಷ್ಟಕರವಾಗಿದೆ. ಆದ್ದರಿಂದ ಕೇಂದ್ರ ಮತ್ತು ಸರ್ಕಾರ ಒಗ್ಗೂಡಿ ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು. ಸರಕಾರ ಗ್ರಾಚ್ಯುಟಿ ಹಣ ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಅಂಗನವಾಡಿ ನೌಕರರ ಸಂಘ ಶಹಾಬಾದ್ ತಾಲ್ಲೂಕು ಸಮಿತಿ ಅಧ್ಯಕ್ಷ ಸಾಬಮ್ಮ ಎಮ್.ಕಾಳಗಿ ಆಗ್ರಹಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಸಾಯಬಣ್ಣಾ ಗುಡುಬಾ, ಶೇಖಮ್ಮ ಕುರಿ, ಶಾರದಾ, ಮೈತ್ರಾ, ಅಂಬೂಜ ಇದ್ದರು.