ಯಡ್ರಾಮಿ: ತಾಲ್ಲೂಕಿನ ಬಿಳವಾರ ಗ್ರಾಮದಿಂದ ಚಾಮನಾಳದ ನಡುವೆ ನಿರ್ಮಿಸುತ್ತಿರುವ ಡಾಂಬರ್ ರಸ್ತೆ ಸಂಪೂರ್ಣವಾಗಿ ಕಳಪೆ ಮಟ್ಟದಿಂದ ಕೂಡಿದ್ದುˌ ಡಾಂಬರ್ ಹಾಕಿದ ಮರುದಿನವೇ ಕಿತ್ತು ಹೋಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕೇವಲ 2.5 ಕಿಮೀ ರಸ್ತೆಗೆ ಅಪೆಂಡಿಕ್ಸ್ ಇ ಯೋಜನೆಯಡಿ 2ಕೋಟಿˌ ಎಸ್ಡಿಪಿ(ಸ್ಪೇಶಲ್ ಡೆವೆಲಪಮೆಂಟ್ ಪ್ಯಾಕೇಜ್) 2.5 ಸೇರಿ ಒಟ್ಟು 4.5 ಕೋಟಿಯಲ್ಲಿ ಈ ರಸ್ತೆ ಕಾಮಗಾರಿಗೆ ಟೆಂಡರ್ ಆಗಿದೆ. ಹಣವೇನೋ ಭರ್ಜರಿಯಾಗಿ ಇಡಲಾಗಿದೆ ಆದರೆ ಗುಣಮಟ್ಟ ಮಾತ್ರ ಶೂನ್ಯ ಎನ್ನುವಂತಾಗಿದೆ. ಮಳೆಯಲ್ಲಿಯೇ ಕಾಮಗಾರಿ ನಡೆಯುತ್ತಿದೆ. ಹಿಂದಿನ ರಸ್ತೆಯನ್ನು ಅಗೆಯದೆ ಮೊದಲಿನ ರಸ್ತೆಯ ಮೇಲೆಯೆ ಡಾಂಬರ್ ಹಾಕಲಾಗುತ್ತಿದೆ.
ಮುದೋಳ ಕ್ರಾಸ್ ದಿಂದ ಚಾಮನಾಳ ಕ್ರಾಸ್ ದವರೆಗೆ ಇರುವ 20 ಕಿಮೀ ದೂರವನ್ನು ತಾಸುಗಟ್ಟಲೇ ಪ್ರಯಾಣಿಸಬೇಕಿದೆ. ಈ ಭಾಗದ ಜನರು ಉತ್ತಮ ರಸ್ತೆ ನಿರ್ಮಿಸುವಂತೆ ಒತ್ತಾಯಿಸಿದ್ದರು. ಅಂತೆಯೇ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಆದರೆ ಮಾಡುತ್ತಲೇ ಹಾಗೆ ಕಿತ್ತುಕೊಂಡು ಹೋಗುತ್ತಿರುವುದು ಮಾತ್ರ ದುರಂತವೇ ಸರಿ.
ಈ ರಸ್ತೆ ರಾಜ್ಯ ಹೆದ್ದಾರಿಯಾಗಿರುವುದರಿಂದ ಹಲವು ವಾಹನಗಳು ಸಂಚರಿಸುತ್ತವೆ. ಬಳಬಟ್ಟಿˌ ಬಿಳವಾರˌ ಕಾಚೂರˌ ಮಂಗಳೂರುˌ ಅಂಬರಖೇಡˌ ಮಲ್ಲಾಬಾದˌ ಹಂಗರಗಾ ಗ್ರಾಮ ಸೇರಿದಂತೆ ಹಲವು ಗ್ರಾಮಗಳ ಜನರು ಇದೇ ರಸ್ತೆಯ ಮೂಲಕ ಸಂಚರಿಸುತ್ತಾರೆ. ತಾಲ್ಲೂಕಿನ ಪ್ರಭಾವಿಗಳು ಈ ಗುತ್ತಿಗೆ ಪಡೆದುಕೊಂಡಿದ್ದರಿಂದ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುತ್ತಿರುವ ಈ ಕಾಮಗಾರಿಯ ಬಳಿ ಎಇಇˌ ಜೆಇ ಯಾರೂ ಇರುವುದಿಲ್ಲ. ಗುತ್ತಿಗೆದಾರ ಮಾಡಿರುವುದೇ ಅಂತಿಮ ಎನ್ನುವ ಹಾಗೆ ಆಗಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಗುಣಮಟ್ಟದ ಕಾಮಗಾರಿ ನಿರ್ಮಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…