ತುಮಕೂರು : ಪಿಂಚಣಿ ಸೌಲಭ್ಯವು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅನುದಾನಿತ ಶಾಲಾ, ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿ ನಗರದ ಸಿದ್ಧಗಂಗಾ ಮಠ ದಿಂದ ಬೆಂಗಳೂರಿಗೆ ಪಾದಯಾತ್ರೆಯಲ್ಲಿ ಆರಂಭಿಸಿದರು.
ರಾಜ್ಯ ಕಾಲೇಜುಗಳ ಅನುದಾನಿತ ನೌಕರರ ಶಾಲೆ ಸಂಘದ ನೇತೃತ್ವದಲ್ಲಿ ಈ ಹೋರಾಟ ಹಮ್ಮಿಕೊಂಡಿದ್ದು, ಮಠದ ಆವರಣದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ನೌಕರರು ಘೋಷಣೆ ಕೂಗುತ್ತಾ ಪಾದಯಾತ್ರೆಗೆ ಚಾಲನೆ ನೀಡಿದರು. 2006 ರ ಏಪ್ರಿಲ್ ನಂತರ ನೇಮಕ ಗೊಂಡ ನೌಕರರ ಎನ್‍ಪಿಎಸ್ ಯೋಜನೆಗೆ ಆಡಳಿತ ಮಂಡಳಿಯ ವಂತಿಗೆಯನ್ನು ಸರ್ಕಾರವೇ ಭರಿಸ ಬೇಕು ಮತ್ತು ಕಾಲ್ಪನಿಕ ವೇತನ ಜಾರಿ ಗೊಳಿಸಬೇಕು.
2006 ರ ಏಪ್ರಿಲ್‍ಗೂ ಮುನ್ನ ನೇಮಕವಾಗಿ ನಂತರ ಅನುದಾನಕ್ಕೆ ಹಿಂದಿನ ಸೇವೆಯನ್ನೂ ಪರಿಗಣಿಸಿ ಒಳಪಟ್ಟ ನೌಕರರ ಹಳೆ ಪಿಂಚಣಿ ಸೌಲಭ್ಯ ಜಾರಿಗೊಳಿ ಸಬೇಕು ಎಂಬುದು ಪ್ರಮುಖ ಬೇಡಿಕೆಗಳು. ಸಂಜೀವಿನಿ ಹಾಗೂ ಸೌಲಭ್ಯಗಳನ್ನು ಜ್ಯೋತಿ ಇತರ ವೈದ್ಯಕೀಯ ತಾರತಮ್ಯ ಇಲ್ಲದೆ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ನೀಡಬೇಕು ಎಂಬ ಬೇಡಿಕೆಯೂ ಸೇರಿದೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಹನುಮಂತಪ್ಪ ತಿಳಿಸಿದರು.
ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸದ ಬೆಂಗಳೂರಿನ ಕಾರಣ ಅ.10 ರಿಂದ ಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾ ವಧಿ ಧರಣಿ ನಡೆಸಲು ನಿರ್ಧರಿಸಿದ್ದೇವೆ. ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಆರ್.ಹನುಮೇಶ್, ಉಪಾಧ್ಯಕ್ಷ ಪಿ.ಡಿ.ರವಿ, ಪ್ರಚಾರ ಸಮಿತಿ ಅಧ್ಯಕ್ಷ ವೆಂಕಟಾಚಲ, ಕಾರ್ಯಾಧ್ಯಕ್ಷ ಸಿ.ಎಂ.ಶಶಿಧರ, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಅಧ್ಯಕ್ಷ ಜೆ.ಧಮೇರ್ಂದ್ರ ಪ್ರಸಾದ್, ಪದಾಧಿಕಾರಿಗಳಾದ ನರೇಶ್, ಗಜೇಂದ್ರ, ಗುಲಬರ್ಗಾ ಜಿಲ್ಲಾ ಪ್ರೌಢಶಾಲೆ ಮುಖ್ಯಶಿಕ್ಷಕರ ಹಾಗೂ ಕಿರಿಯ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಮರೆಪ್ಪ ಎಂ.ಬಸವಪಟಣ, ರಾಜಶೇಖರ್ ತಲಾರಿ, ರಂಗರಾವ, ಸೋಮನಾಥ ಇಂಡಿ, ಗುರುನಾಥ ಹೆರೂರ, ಇಸಾಮುದ್ದಿನ ಖಾಜಿ ಹಾಗೂ ಕಲಬುರಗಿ ಯಿಂದ ಹಲವಾರು ಶಿಕ್ಷಕರು ಭಾಗವಹಿಸಿದರು.
“ಪಿಂಚಣಿ ಸೌಲಭ್ಯವಿಲ್ಲದೇ ಸೇವೆಯಿಂದ ನಿವೃತ್ತಿ”: ನೌಕರರು ವೇತನ ಅನುದಾನಕ್ಕೆ ಒಳಪಡುವುದಕ್ಕೂ ಪೂರ್ವದ ಸೇವೆಯನ್ನು ಪರಿಗಣಿಸಿ ಸೌಲಭ್ಯ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಸರ್ಕಾರ ಜಾರಿಗೆ ತಂದಿಲ್ಲ . ಈಗಾಗಲೇ 3 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಪಿಂಚಣಿ ಸೌಲಭ್ಯವಿಲ್ಲದೇ ನಿವೃತ್ತಿಯಾಗಿದ್ದಾರೆ . ನಮ್ಮಲ್ಲಿ ಮಾತ್ರ ತಾರತಮ್ಯ ಮಾಡಲಾಗುತ್ತಿದೆ . ಹೊರ ರಾಜ್ಯಗಳಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಪಿಂಚಣಿ ಸೌಲಭ್ಯವಿದೆ. ಜಿ.ಹನುಮಂತಪ್ಪ, ಅಧ್ಯಕ್ಷ, ರಾಜ್ಯ ಅನುದಾನಿತ ಶಾಲೆ, ಕಾಲೇಜುಗಳ ನೌಕರರ ಸಂಘ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…