ಬಿಸಿ ಬಿಸಿ ಸುದ್ದಿ

ಪ ಜಾ- ಪ .ಪಂ ಗಳ ಮೀಸಲಾತಿ ಹೆಚ್ಚಿಸುವ ತೀರ್ಮಾನ ಐತಿಹಾಸಿಕ: ಶಾಸಕ ತೇಲ್ಕೂರ

ಕಲಬುರಗಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರ ಐತಿಹಾಸಿಕವಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರರು, ಸೇಡಂ ಮತಕ್ಷೇತ್ರದ ಶಾಸಕರಾದ ರಾಜಕುಮಾರ ಪಾಟೀಲ್ ತಿಳಿಸಿದ್ದಾರೆ.

ನ್ಯಾ.ನಾಗಮೋಹನ್ ದಾಸ್ ವರದಿ ಪ್ರಕಾರ ಎಸ್.ಸಿ ಸಮುದಾಯಕ್ಕೆ ಶೇ.15 ರಿಂದ ಶೇ.17 ‌ಹಾಗೂ ಎಸ್.ಟಿ ಸಮುದಾಯಕ್ಕೆ ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸುವ ಮುಖಾಂತರ ಸಮುದಾಯಕ್ಕೆ ಸ್ಪಂದಿಸಿದಂತಾಗಿದೆ ಎಂದಿದ್ದಾರೆ.

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಮಾನ ಅವಕಾಶಗಳು ಅಗತ್ಯ ಎಂದು ಮನಗಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಹಾಗೂ ಸಂಪುಟದ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಬದಲಾವಣೆ ತರಲು ಸಮಾನ ಅವಕಾಶಗಳನ್ನು ನೀಡಿದಾಗ ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರು ಮೇಲೆ ಬರುತ್ತಾರೆ. ಆ ಅವಕಾಶವೇ ಇಲ್ಲದಿದ್ದರೆ, ತುಳಿತಕ್ಕೆ ಒಳಪಟ್ಟರೆ, ತಲೆಮಾರುಗಳು ಕಷ್ಟಪಡುವಂತಾದರೆ ಎಂದಿಗೂ ಆರೋಗ್ಯಕರ ಸಮಾಜವನ್ನು ಕಟ್ಟಲು ಸಾಧ್ಯವಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯಲ್ಲಿ ಹೆಚ್ಚಳ ಮಾಡುವ ಅವಕಾಶ ಹಾಗೂ ಸಂಕಲ್ಪವನ್ನು ನೆರವೇರಿಸಿರುವುದು ಸಾಮಾನ್ಯವಾದುದ್ದಲ್ಲ ಎಂದು ತಿಳಿಸಿದ್ದಾರೆ.

ಎಲ್ಲರಿಗೂ ಸಮಾನ ಅವಕಾಶ, ಗೌರವ, ಮತ್ತು ಕಾಯಕ ನಿಷ್ಠೆಯ ಬದುಕನ್ನು ಬಸವಣ್ಣ ಸಾರಿದ್ದಾರೆ. ಧರ್ಮದಲ್ಲಿ ಸಮಾನತೆ ಮಾತ್ರವಲ್ಲ, ಲಿಂಗ ಬೇಧ ಮರೆತು ಅಲ್ಲಿಯೂ ಸಮಾನತೆ ತರುವ ಅಗತ್ಯವಿದೆ. ಕೌಟುಂಬಿಕ ಸಮಾನತೆಯಿಂದ ಹಿಡಿದು ಮಾನವಕುಲಕ್ಕೆ ಸಮಾನತೆ ತರಬೇಕಿದೆ. ವೃತ್ತಿ ಗೌರವದ ಜೊತೆಗೆ ಮೇಲು ಕೀಳು ಇಲ್ಲದಿರುವುದು ಅಗತ್ಯ. ಜ್ಞಾನಕ್ಕೆ ಜಾತಿ, ಧರ್ಮ ಇಲ್ಲ. ಕಾಯಕ ಸಮುದಾಯಗಳು ತುಳಿತಕ್ಕೆ ಒಳಗಾದ ಸಂದರ್ಭದಲ್ಲಿ ಬಸವಣ್ಣ ಕೈಗೊಂಡ ವೈಚಾರಿಕ ಕ್ರಾಂತಿ, ಸಾಮಾಜಿಕ ಕ್ರಾಂತಿಯಾಗಿ ಬದಲಾಯಿತು. ತನ್ನನ್ನು ತಾನೇ ಇದಕ್ಕೆ ಅರ್ಪಿಸಿಕೊಳ್ಳುವ ಪ್ರಸಂಗ ಬಂದರೂ ಹಿಂದೆ ಮುಂದೆ ನೋಡಲಿಲ್ಲ. ಸಮಾಜದಲ್ಲಿ ಮತ್ತೊಮ್ಮೆ ಸಂಘರ್ಷ ದೂರ ಮಾಡಿ ಸಮಾನತೆ ತರುವ ಕಾಲ ಈ ಮೂಲಕ ಕೂಡಿ ಬಂದಿದೆ ಎಂದು ತೇಲ್ಕೂರ ವಿವರಣೆ ನೀಡಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

28 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

30 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

33 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago