ಜನತಾ ಮಿತ್ರ ಸಮಾವೇಶದಲ್ಲಿ ಅಬ್ಬರಿಸಿದ ಮಾಜಿ ಪ್ರಧಾನಿ ದೇವೇಗೌಡ

  • ನನ್ನ ಕಣ್ಣ ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರುವುದು ಸತ್ಯ ಎಂದ ಹೆಚ್.ಡಿ.ದೇವೇಗೌಡರು
  • ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದನ್ನು ತಪ್ಪಿಸಲಾಗದು ಎಂದ ಮಣ್ಣಿನಮಗ

ಬೆಂಗಳೂರು: ನನ್ನ ಕಣ್ಣ ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರುವುದು ಸತ್ಯ. ಕುಮಾರಸ್ವಾಮಿ ಅವರು ಮತ್ತೆ ಸಿಎಂ ಆಗಿಯೇ ಆಗುತ್ತಾರೆ. ಇದು ನಡೆದೇ ನಡೆಯುತ್ತದೆ, ಯಾರಿಗೂ ಸಂಶಯ ಬೇಡ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್‍ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದರು.

ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಜೆಡಿಎಸ್‍ ಪಕ್ಷದವತಿಯಿಂದ ಇಂದು ಹಮ್ಮಿಕೊಂಡಿದ್ದ ʼಜನತಾ ಮಿತ್ರʼ ಸಮಾರೋಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಕೊನೆಯವರೆಗೂ ರಾಜ್ಯದ ನೆಲ, ಜಲದ ವಿಷಯದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ. ರಾಜ್ಯದಲ್ಲಿ ಪಕ್ಷ ಉಳಿಯುವುದರ ಜತೆಗೆ ಬೆಳೆಯಲಿದೆ. ಯಾರು ಏನೂ ಮಾಡಲಾರರು ಎಂದು ಜೆಡಿಎಸ್ ಕುರಿತು ಕೇವಲವಾಗಿ ಮಾತನಾಡುವವರಿಗೆ ಗೌಡರು ತಿರುಗೇಟು ನೀಡಿದರು.

ಪಕ್ಷವನ್ನು ಉಳಿಸಿ, ಬೆಳೆಸುವಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಹುರಿದುಂಬಿಸಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪಕ್ಷವನ್ನು ಉಳಿಸಲು ಹತ್ತು ವರ್ಷಗಳಿಂದ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಅದರ ಶ್ರಮ ಏನೆಂಬುದು ನನಗೆ ಗೊತ್ತು. ಅದರ ಹಿಂದಿನ ವಿಚಾರಗಳನ್ನು ಮಾತನಾಡಲು ನಾನು ಇಷ್ಟಪಡುವುದಿಲ್ಲ. ನನ್ನ ಆರೋಗ್ಯ ಇನ್ನು ಸ್ವಲ್ಪ ಚೇತರಿಸಿಕೊಳ್ಳಬೇಕು. ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಲಿದ್ದೇನೆ. ಇದೇ ತಿಂಗಳು 18ರಂದು ಪಕ್ಷದ ಕಾರ್ಯಕಾರಿ ಸಭೆ ಇದ್ದು, ಅದರಲ್ಲಿ ಭಾಗಿಯಾಗುತ್ತೇನೆ ಎಂದು ಅವರು ಹೇಳಿದರು.

ಯಾವುದೇ ಒಂದು ಸಮಾಜಕ್ಕೆ ನೋವಾಗಲು ಬಿಡುವುದಿಲ್ಲ. ಅಲ್ಲದೇ, ಮಾತುಕೊಟ್ಟ ಮೇಲೆ ಅದನ್ನು ಕಾರ್ಯಗತ ಮಾಡಲೇಬೇಕು. ಅದಕ್ಕೆ ನಾವು ಬದ್ಧವಾಗಿರುತ್ತೇವೆ. ಮುಸ್ಲಿಮರಿಗೆ ಮೀಸಲಾತಿ ನೀಡುತ್ತೇವೆ ಎಂದು ಹೇಳಿರಲಿಲ್ಲ. ಆದರೂ ನಮ್ಮ ಸರ್ಕಾರ ಅದನ್ನು ಮಾಡಿದೆ. ಅಲ್ಲದೇ, ಮುಸ್ಲಿಂ ಸಮುದಾಯಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದು, ರೆಸಿಡೆನ್ಸಿ ಶಾಲೆಗಳನ್ನು ನೀಡಿದವರು ಯಾರು ಎಂಬುದನ್ನು ಎಲ್ಲರೂ ನೆನಪಿಸಿಕೊಳ್ಳಬೇಕು. ಐದು ರೆಸಿಡೆನ್ಸಿ ಶಾಲೆಗಳನ್ನು ನೀಡುವ ತೀರ್ಮಾನ ಮಾಡಿದ್ದು ನಾನು ಎಂದರು.

ರಾಜಕಾರಣದಲ್ಲಿ ಪ್ರತಿ ಹಂತದಲ್ಲಿಯೂ ಹೋರಾಟ ಮಾಡಿದ್ದೇನೆ. ಮುಖ್ಯಮಂತ್ರಿ ಆಗಬೇಕಾದರೂ ಹೋರಾಟ ಮಾಡಬೇಕಾಯಿತು.

90ರ ದಶಕದಲ್ಲಿ ಪಕ್ಷದಿಂದ ಹೊರಗೆ ಬಂದ ಮೇಳೆ ಏಕಾಂಗಿ ಹೋರಾಟ ನಡೆಸಿ ಸನ್ಮಿತ್ರರ ಜೊತೆ ಪಕ್ಷವನ್ನು ಕಟ್ಟಿದ್ದೇನೆ. ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದಲ್ಲಿ ಪಕ್ಷಕ್ಕೆ 16 ಲೋಕಸಭಾ ಸ್ಥಾನ ಬಂತು. ಅಷ್ಟು ಸ್ಥಾನಗಳಿಸುವುದು ಅಷ್ಟು ಸುಲಭವಾಗಿರಲಿಲ್ಲ ಎಂದ ಹೇಳಿದ ಅವರು, ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಕೆಲವರು ಒಂದೊಂದು ರೀತಿಯ ಹೇಳಿಕೆ ನೀಡಿದರು.

ನಾನು ಇನ್ನೂ ಇದ್ದೇನೆಂದು ತೋರಿಸಲು ಇಲ್ಲಿ ಕರೆದುಕೊಂಡು ಬಂದಿದ್ದಾರೆ ಎಂಬ ಭಾವನೆ ಬೇಡ. ಇನ್ನು ಹೋರಾಟ ಮಾಡುವೆ. ನಾವು, ನೀವೆಲ್ಲರೂ ಸೇರಿ ಈ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು ಕರೆ ನೀಡಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420