ಮೀಸಲಾತಿ ಹೆಚ್ಚಳ ತೀರ್ಮಾನ: ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ

0
10

ಕಲಬುರಗಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರ ಐತಿಹಾಸಿಕವಾಗಿದೆ ಎಂದು ಆಳಂದ ಮತಕ್ಷೇತ್ರದ ಶಾಸಕರಾದ ಸುಭಾಷ್ ಆರ್ ಗುತ್ತೇದಾರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನ್ಯಾ.ನಾಗಮೋಹನ್ ದಾಸ್ ವರದಿ ಪ್ರಕಾರ ಎಸ್.ಸಿ ಸಮುದಾಯಕ್ಕೆ ಶೇ.15 ರಿಂದ ಶೇ.17 ಹಾಗೂ ಎಸ್.ಟಿ ಸಮುದಾಯಕ್ಕೆ ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸುವ ಮುಖಾಂತರ ಸಮುದಾಯಕ್ಕೆ ಸ್ಪಂದಿಸಿದಂತಾಗಿದೆ ಎಂದಿದ್ದಾರೆ.

Contact Your\'s Advertisement; 9902492681

ಮುಖ್ಯಮಂತ್ರಿಗಳು ಈ ತೀರ್ಮಾನ ಕೈಗೊಳ್ಳುವುದರ ಮೂಲಕ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆಯಲ್ಲಿ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ ಅಲ್ಲದೇ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಕಾರ್ಯ ಮಾಡುತ್ತಿದ್ದಾರೆ ಎಂದು ವ್ಯಾಖ್ಯಾನಿಸಿದ್ದಾರೆ.
ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಮಾನ ಅವಕಾಶಗಳು ಅಗತ್ಯ ಎಂದು ಮನಗಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಹಾಗೂ ಸಂಪುಟದ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಬದಲಾವಣೆ ತರಲು ಸಮಾನ ಅವಕಾಶಗಳನ್ನು ನೀಡಿದಾಗ ಅವರವರ ಸಾಮಥ್ರ್ಯಕ್ಕೆ ಅನುಗುಣವಾಗಿ ಅವರು ಮೇಲೆ ಬರುತ್ತಾರೆ. ಆ ಅವಕಾಶವೇ ಇಲ್ಲದಿದ್ದರೆ, ತುಳಿತಕ್ಕೆ ಒಳಪಟ್ಟರೆ, ತಲೆಮಾರುಗಳು ಕಷ್ಟಪಡುವಂತಾದರೆ ಎಂದಿಗೂ ಆರೋಗ್ಯಕರ ಸಮಾಜವನ್ನು ಕಟ್ಟಲು ಸಾಧ್ಯವಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯಲ್ಲಿ ಹೆಚ್ಚಳ ಮಾಡುವ ಅವಕಾಶ ಹಾಗೂ ಸಂಕಲ್ಪವನ್ನು ನೆರವೇರಿಸಿರುವುದು ಸಾಮಾನ್ಯವಾದುದ್ದಲ್ಲ ಎಂದು ತಿಳಿಸಿದ್ದಾರೆ.

ಎಲ್ಲರಿಗೂ ಸಮಾನ ಅವಕಾಶ, ಗೌರವ, ಮತ್ತು ಕಾಯಕ ನಿμÉ್ಠಯ ಬದುಕನ್ನು ಬಸವಣ್ಣ ಸಾರಿದ್ದಾರೆ. ಧರ್ಮದಲ್ಲಿ ಸಮಾನತೆ ಮಾತ್ರವಲ್ಲ, ಲಿಂಗ ಬೇಧ ಮರೆತು ಅಲ್ಲಿಯೂ ಸಮಾನತೆ ತರುವ ಅಗತ್ಯವಿದೆ. ಕೌಟುಂಬಿಕ ಸಮಾನತೆಯಿಂದ ಹಿಡಿದು ಮಾನವಕುಲಕ್ಕೆ ಸಮಾನತೆ ತರಬೇಕಿದೆ. ವೃತ್ತಿ ಗೌರವದ ಜೊತೆಗೆ ಮೇಲು ಕೀಳು ಇಲ್ಲದಿರುವುದು ಅಗತ್ಯ. ಜ್ಞಾನಕ್ಕೆ ಜಾತಿ, ಧರ್ಮ ಇಲ್ಲ. ಕಾಯಕ ಸಮುದಾಯಗಳು ತುಳಿತಕ್ಕೆ ಒಳಗಾದ ಸಂದರ್ಭದಲ್ಲಿ ಬಸವಣ್ಣ ಕೈಗೊಂಡ ವೈಚಾರಿಕ ಕ್ರಾಂತಿ, ಸಾಮಾಜಿಕ ಕ್ರಾಂತಿಯಾಗಿ ಬದಲಾಯಿತು.

ತನ್ನನ್ನು ತಾನೇ ಇದಕ್ಕೆ ಅರ್ಪಿಸಿಕೊಳ್ಳುವ ಪ್ರಸಂಗ ಬಂದರೂ ಹಿಂದೆ ಮುಂದೆ ನೋಡಲಿಲ್ಲ. ಸಮಾಜದಲ್ಲಿ ಮತ್ತೊಮ್ಮೆ ಸಂಘರ್ಷ ದೂರ ಮಾಡಿ ಸಮಾನತೆ ತರುವ ಕಾಲ ಈ ಮೂಲಕ ಕೂಡಿ ಬಂದಿದೆ ಎಂದು ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here